Advertisement

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

11:53 PM Jul 03, 2024 | Team Udayavani |

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಬಿಜೆಪಿ ಪ್ರತಿಭಟನೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್‌ಐಟಿಗೆ ವಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ. ಡೆತ್‌ ನೋಟಿನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖೀಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜೀನಾಮೆ ಪಡೆದೆವು. ಬ್ಯಾಂಕ್‌ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎಂದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಅವರಿಗೂ ಪಾಲು ಹೋಗಿದೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಅದಕ್ಕಾಗಿಯೇ ಎಸ್‌ಐಟಿ ರಚನೆಯಾಗಿದೆ. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.

Advertisement

ಅಕ್ರಮದ ಸತ್ಯಾಂಶ ತಿಳಿಯಲು ತನಿಖೆ
ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಎಲ್ಲ ನಿವೇಶನಗಳನ್ನು ಅಮಾನತಿನಲ್ಲಿಡಲಾಗಿದೆ. ಹಾಗಾಗಿ ಸರಕಾರಕ್ಕೆ ನಷ್ಟವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಬುಧವಾರ ಈ ಕುರಿತು ಅವರು ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ನಿವೇಶನಗಳನ್ನು ಹಂಚಿಕೆ ಮಾಡಿದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್‌ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ಅನಂತರ ಈ ಬಗ್ಗೆ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪ ಮಾಡಿದ್ದು, ಸಿಬಿಐಗೆ ಪ್ರಕರಣ ಹಸ್ತಾಂತರ ಮಾಡಲು ಒತ್ತಾಯಿಸಿರುವ ಕುರಿತು ಮಾತನಾಡಿದ ಸಿಎಂ, ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು? ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next