Advertisement

Sakala Yojana ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ: ಅಪರ ಜಿಲ್ಲಾಧಿಕಾರಿ

12:58 AM Aug 29, 2024 | Team Udayavani |

ಮಂಗಳೂರು: ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪ್ರಗತಿ ಪರಿಶೀಲನೆಗೆ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲೂ ತನಿಖಾ ತಂಡ ರಚನೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ| ಜಿ. ಸಂತೋಷ್‌ ಕುಮಾರ್‌ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದ ತಂಡವು ಪ್ರತಿ ತಿಂಗಳು ಸಭೆ ನಡೆಸಿ ಆಯಾ ಇಲಾಖೆಯಲ್ಲಿ ಸಕಾಲ ಅಭಿಯಾನದಡಿ ಸಲ್ಲಿಕೆಯಾಗಿರುವ ಯೋಜನೆಗಳ ಅರ್ಜಿಗಳ ವರದಿಯನ್ನು ಪರಿಶೀಲಿಸಬೇಕು. ಈ ಸಂಬಂಧ ಸಭೆ ನಡೆಸಿ ನಡಾವಳಿಯನ್ನು ಸಕಾಲ ಪೋರ್ಟಲ್‌ಗೆ ಸಲ್ಲಿಸಬೇಕು ಎಂದು ಅವರು ಹೇಳಿದರು.

ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಆದ್ಯತೆಯಲ್ಲಿ ಸಂಬಂಧಿಸಿದ ಇಲಾಖೆಗಳು ಪರಿಶೀಲಿಸಿ ಇತ್ಯರ್ಥಪಡಿಸಬೇಕು. ಜಿಲ್ಲೆಯಲ್ಲಿ ಇದುವರೆಗೆ ಜರಗಿದ ಜನತಾ ದರ್ಶನದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಿರುವ ಬಗ್ಗೆ ಕೂಡಲೇ ವರದಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಕನ್ನಡ ಭಾಷಾ ಸಮಗ್ರ ಮಸೂದೆ ಆದೇಶದಂತೆ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯಾಗಿರುವ ಬಗ್ಗೆ ಎಲ್ಲ ಇಲಾಖೆಗಳು ತಮ್ಮ ಅಧೀನ ಸಂಸ್ಥೆಗಳಲ್ಲಿ ಪರಿಶೀಲಿಸಿ ವರದಿ ನೀಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ಗಿರೀಶ್‌ ನಂದನ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next