ಬೆಂಗಳೂರು: ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಮತ್ತೊಂದು ದೊಡ್ಡ ಸಂಕಷ್ಟ ಎದುರಾಗಿದೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನೀಡಿರುವ ವೈದ್ಯಕೀಯ ಮಧ್ಯಂತರ ಜಾಮೀನು ರದ್ದು ಕೋರಿ ತನಿಖಾಧಿಕಾರಿಗಳು ಸರ್ಕಾರದ ಮೂಲಕ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ವಕೀಲರ ಮೂಲಕ ಡಿ.4ರಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಕೋರಲಾಗಿದೆ.
ಈ ಅರ್ಜಿ ಇದೇ ಶುಕ್ರವಾರ ಅಥವಾ ಮುಂದಿನ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಟ ದರ್ಶನ್ ಮಧ್ಯಂತರ ಜಾಮೀನು ಅವಧಿ ಮುಗಿ ಯಲು ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈ ಮಧ್ಯೆ ಶಸ್ತ್ರ ಚಿಕಿತ್ಸೆ ಹಾಗೂ ಫಿಸಿಯೋಥೆರಪಿ ನೆಪವೊಡ್ಡಿ ಜಾಮೀನು ಅವಧಿಯನ್ನು ದರ್ಶನ್ ವಿಸ್ತರಿಸಿಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದೆ ಎಂದು ಹೇಳಲಾಗಿದೆ.