Advertisement
ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್ ಮೊದಲಾದವರು ಭಾಗವಹಿಸಿದ್ದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಉಳಿದ 6 ಯೋಜನೆಗಳು ಹೆಚ್ಚುವರಿ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಾಗಿವೆ. ಇವುಗಳಲ್ಲಿ ಮುಸಾಶಿ ಆಟೋ ಪಾರ್ಟ್ಸ್ (ದೊಡ್ಡಬಳ್ಳಾಪುರ) 122.66 ಕೋಟಿ ರೂ. ಜೆಎಸ್‌ಡಬ್ಲ್ಯು ಸಿಮೆಂಟ್ (ತೋರಣಗಲ್, ಬಳ್ಳಾರಿ) 486.82 ಕೋಟಿ ರೂ. ನೈಡೆಕ್ ಇಂಡಸ್ಟ್ರಿಯಲ್ ಆಟೋಮೇಷನ್ (ಬೇಲೂರು, ಧಾರವಾಡ) 200 ಕೋಟಿ ರೂ. ಎಪ್ಸಿಲಾನ್ ಕಾರ್ಬನ್ (ಸಂಡೂರು) 740 ಕೋಟಿ ರೂ. ಕೆ.ಬಿ.ಸ್ಟೀಲ್ಸ್ (ಹೊಸಪೇಟೆ, ವಿಜಯನಗರ) 852.49 ಕೋಟಿ ರೂ. ಮತ್ತು ಸಿಫಿ ಡೇಟಾ ಮ್ಯಾನೇಜ್ ಸರ್ವಿಸಸ್ (ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್) 847.74 ಕೋಟಿ ರೂ.ಗಳನ್ನು ರಾಜ್ಯದಲ್ಲಿ ಹೆಚ್ಚುವರಿಯಾಗಿ ಹೂಡಿಕೆ ಮಾಡಲಿವೆ. ಇವುಗಳಿಂದ ಕ್ರಮವಾಗಿ ಮೊದಲ 4 ಕಂಪನಿಗಳಲ್ಲಿ ಮಾತ್ರ 478, 225, 150 ಮತ್ತು 325 ಉದ್ಯೋಗಗಳು ಸೃಷ್ಟಿಯಾಗಲಿವೆ.