Advertisement

ಬಂಡವಾಳ ಹೂಡಿಕೆ ಪ್ರಸ್ತಾವ; ಕರ್ನಾಟಕ ಪ್ರಥಮ ಸ್ಥಾನದಲ್ಲಿ: ಶೆಟ್ಟರ್‌

11:54 PM Dec 29, 2020 | Team Udayavani |

ಬೆಂಗಳೂರು: ಕೋವಿಡ್‌-19ರ ಸಂಕಷ್ಟದ ನಡುವೆಯೂ ಕರ್ನಾಟಕ ಬಂಡವಾಳ ಹೂಡಿಕೆ ಪ್ರಸ್ತಾವದಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

Advertisement

ಅಸೋಚಾಮ್‌ ಏರ್ಪಡಿಸಿದ್ದ ಮುಕ್ತ ಅವಕಾಶದ ಮೂಲಕ ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್‌ ಪೂರೈಕೆ’ ಕುರಿತ ವೆಬಿನಾರ್‌ಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಜನವರಿಯಿಂದ ಅಕ್ಟೋಬರ್‌ವರೆಗಿನ ಅವಧಿಯಲ್ಲಿ 1,54,937 ಕೋಟಿ ರೂ. ಮೊತ್ತದ 95 ಹೂಡಿಕೆ ಪ್ರಸ್ತಾವನೆಗಳು ನೋಂದಣಿಯಾಗಿವೆ. ಈ ಮೂಲಕ ರಾಜ್ಯವು ಹೂಡಿಕೆ ಪ್ರಸ್ತಾವದ ವಿಚಾರದಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ ಎಂದು ಹೇಳಿದರು.

ಹಾಗೆಯೇ 2019ರ ಆಗಸ್ಟ್‌ನಿಂದ ಈವರೆಗೆ ರಾಜ್ಯ ಉನ್ನತ ಮಟ್ಟದ ಸಮಿತಿ ಹಾಗೂ ರಾಜ್ಯ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿಯು 410 ನೂತನ ಯೋಜನೆಗಳಿಗೆ ಅನುಮತಿ ನೀಡಿದೆ. ಇದರಿಂದ ರಾಜ್ಯದಲ್ಲಿ 82,015 ಕೋಟಿ ರೂ. ಬಂಡವಾಳ ಹೂಡಿಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, 2,27,147 ಉದ್ಯೋಗ ಸೃಷ್ಟಿಯಾಗಲಿವೆ ಎಂದು ತಿಳಿಸಿದರು.

ರಾಜ್ಯವು ವಿದ್ಯುತ್‌ ಕ್ಷೇತ್ರದಲ್ಲಿ ಸ್ವಾವಲಂಬಿ ಯಾಗಿದ್ದು, ಎಲೆಕ್ಟ್ರಿಕ್‌ ವಾಹನ ಹಾಗೂ ಡೇಟಾ ಸೆಂಟರ್‌ಗಳಂತಹ ಕ್ಷೇತ್ರಗಳಿಗೆ ವಿದ್ಯುತ್‌ ಬೇಡಿಕೆ ಹೆಚ್ಚುತ್ತಿದೆ. ಸದ್ಯ ನಿರಂತರ ವಿದ್ಯುತ್‌ ಪೂರೈಕೆಗೆ ಗ್ರಿಡ್‌ಗಳನ್ನು ಅವಲಂಬಿಸಲಾಗಿದ್ದು, ಕೆಲ ತಾಂತ್ರಿಕ ಸಮಸ್ಯೆಗಳಿವೆ. ನೂತನ ಬ್ಯಾಟರಿ ಸ್ಟೋರೇಜ್‌ ಸೌಕರ್ಯವನ್ನು ಗ್ರಿಡ್‌ಗಳ ಬಳಿ ನಿರ್ಮಿ ಸುವ ಮೂಲಕ ಈ ಸಮಸ್ಯೆಯಿಂದ ಹೊರಬರಬಹುದಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next