ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿ ನೀರಸ ವಹಿವಾಟಿನ ಪರಿಣಾಮ ಸೋಮವಾರ (ಜೂನ್ 13) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ 1,500ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದೆ. ಇದರಿಂದಾಗಿ ಹೂಡಿಕೆದಾರರ 5.47 ಲಕ್ಷ ಕೋಟಿ ರೂಪಾಯಿ ನಷ್ಟ ಕಂಡಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ, ಇದಕ್ಕೆಲ್ಲಾ ನಾವು ಬಗ್ಗಲ್ಲ: ಸಿದ್ದರಾಮಯ್ಯ
ಇಂದು ಆರಂಭಿಕ ವಹಿವಾಟಿನಲ್ಲಿ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 1,568.46 ಅಂಕಗಳಷ್ಟು ಇಳಿಕೆಯಾಗಿದ್ದು, 52,734.98 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 451.9 ಅಂಕಗಳಷ್ಟು ಕುಸಿತಗೊಂಡಿದ್ದು, 15,749.90 ಅಂಕಗಳಲ್ಲಿ ವಹಿವಾಟು ನಡೆದಿದೆ.
ಭಾರೀ ಪ್ರಮಾಣದಲ್ಲಿ ಸೆನ್ಸೆಕ್ಸ್, ನಿಫ್ಟಿ ಕುಸಿತ ಪರಿಣಾಮ ಹೂಡಿಕೆದಾರರು 5.47 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಬಜಾಜ್ ಫಿನ್ ಸರ್ವ್, ಬಜಾಜ್ ಫೈನಾನ್ಸ್, ಐಸಿಐಸಿಐ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳ ಮೌಲ್ಯ ಭಾರೀ ಕುಸಿತ ಕಂಡಿದೆ.
ಸಿಯೋಲ್, ಟೋಕಿಯೊ, ಹಾಂಗ್ ಕಾಂಗ್, ಶಾಂಘೈ ಷೇರು ಮಾರುಕಟ್ಟೆ ಸೆನ್ಸೆಕ್ಸ್ ಭಾರೀ ಇಳಿಕೆ ಕಂಡಿದೆ. ಅಮೆರಿಕದ ಷೇರು ಮಾರುಕಟ್ಟೆ ಶುಕ್ರವಾರ ಭಾರೀ ಇಳಿಕೆಯೊಂದಿಗೆ ವಹಿವಾಟು ಕೊನೆಗೊಳಿಸಿತ್ತು.