Advertisement

ಹೂಡಿಕೆದಾರರ ಸಮಾವೇಶ ಆರ್ಥಿಕ ಚಟುವಟಿಕೆಗಳ ದಿಕ್ಸೂಚಿ: ಮುಖ್ಯಮಂತ್ರಿ

10:58 PM Oct 31, 2022 | Team Udayavani |

ಬೆಂಗಳೂರು: ನವೆಂಬರ್‌ 2ರಿಂದ ಮೂರು ದಿನಗಳ ಕಾಲ ನಡೆಯಲಿರುವ ಬಂಡವಾಳ ಹೂಡಿಕೆದಾರರ ಸಮಾವೇಶ ರಾಜ್ಯದಲ್ಲಿ ಮುಂದಿನ 5 ವರ್ಷಗಳ ಕಾಲ ಆರ್ಥಿಕ ಚಟುವಟಿಕೆಗಳ ಕುರಿತ ದಿಕ್ಸೂಚಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಮಾವೇಶದಲ್ಲಿ ವಿಶ್ವದ ಪ್ರಮುಖ ಉದ್ಯಮಿಗಳು, ಉದ್ದಿಮೆಯ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಿದ್ದು, ಹೆಚ್ಚಿನ ಬಂಡವಾಳ ಹೂಡಿಕೆ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಂಡವಾಳ ಹೂಡಲು ಈಗಾಗಲೇ ಬಹಳಷ್ಟು ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಅವರ ಯೋಜನೆಗಳ ಅನುಮೋದನೆಯನ್ನೂ ಮಾಡಲಾಗಿದೆ ಎಂದು ಹೇಳಿದರು.

ನವೀಕರಿಸಬಹುದಾದ ಇಂಧನ, ಸೆಮಿಕಂಡಕ್ಟರ್‌, ಏರೋಸ್ಪೇಸ್‌, ರಕ್ಷಣ ಕ್ಷೇತ್ರ ಮುಂತಾದ ಪ್ರಮುಖ ಕ್ಷೇತ್ರಗಳ ಸವಾಲುಗಳು ಹಾಗೂ ಬೆಳವಣಿಗೆ ಬಗ್ಗೆ ಸಮಾವೇಶದಲ್ಲಿ ಚರ್ಚಾ ಗೋಷ್ಠಿಗಳು ನಡೆಯಲಿವೆ. ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪರಿಣಿತರು ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next