Advertisement
ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಐಕಳ ಹರೀಶ್ ಶೆಟ್ಟಿ ಅವರ ಸಂಘಟನಾ ಶಕ್ತಿ ಇತರರಿಗೆ ಮಾದರಿ. ವಿಶ್ವ ಬಂಟರ ಸಮ್ಮೇಳನದ ಮೂಲಕ ಹಲವಾರು ಪ್ರತಿಭೆಗಳಿಗೆ, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಆಗುತ್ತದೆ. ಒಂದೇ ವೇದಿಕೆಯಡಿ ಸಮಾಜದ ಎಲ್ಲರೂ ಪಾಲ್ಗೊಳ್ಳುವಂತಾಗಲಿ, ಸಮ್ಮೇಳನದಿಂದ ಸಮಾಜಕ್ಕೆ ಪ್ರಯೋಜನವಾಗಲಿ ಎಂದು ಹಾರೈಸಿದರು.
ಸಮಾಜದ ಶಕ್ತಿ ಪ್ರದರ್ಶನ
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ, ದೊಡ್ಡ ಸಂಖ್ಯೆಯಲ್ಲಿ ನಮ್ಮ ಸಮುದಾಯದ ಜನರನ್ನು ಸೇರಿಸುವ ಮೂಲಕ ನಮ್ಮ ಶಕ್ತಿಯನ್ನು ಈ ಮೂಲಕ ತೋರಿಸಿಕೊಡಬೇಕು ಎಂದರು. ಬಂಟ್ಸ್ ವೆಲ್ಫೆರ್ ಟ್ರಸ್ಟ್‌ನ ಅಧ್ಯಕ್ಷ ಡಾ| ಎ. ಸದಾನಂದ ಶೆಟ್ಟಿ ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಹೊಸ ದಿಕ್ಕು ತೋರಿಸಿದವರು ಐಕಳ ಹರೀಶ್ ಶೆಟ್ಟಿ. ಬಲಿಷ್ಟ ಸಮಾಜದ ನಿರ್ಮಾಣಕ್ಕೆ ಬಂಟರ ಸಮ್ಮೇಳನದ ಯಶಸ್ಸಿಗೆ ನಾವೆಲ್ಲರೂ ಒಟ್ಟಾಗಿ ದುಡಿಯೋಣ ಎಂದರು.
Related Articles
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಅ. 28ರಂದು ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಮುದಾಯದ ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ತರುವ ಉದ್ದೇಶದಿಂದ ಸಮ್ಮೇಳನ ಆಯೋಜನೆ ಮಾಡಿದ್ದೇವೆ ಎಂದು ಹೇಳಿದರು.
Advertisement
ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಚಟುವಟಿಕೆ ವಿವರಿಸಿ, ಅ. 28ರಂದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಮತ್ತು ಅ. 29ರಂದು ಉಡುಪಿಯ ಶ್ರೀಮತಿ ಅಮ್ಮಣಿ ರಾಮಣ್ಣ ಶೆಟ್ಟಿ ತೆರೆದ ಮೈದಾನದಲ್ಲಿ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ ಎಂದರು.ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕೋಶಾಧಿಕಾರಿ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಸುಧಾಕರ ಎಸ್. ಪೂಂಜ, ಎ. ಜಗನ್ನಾಥ ಚೌಟ, ಲೋಕೇಶ್ ಶೆಟ್ಟಿ, ಸುರೇಶ್ ರೈ ಮಕರಜ್ಯೋತಿ ಉಪಸ್ಥಿತರಿದ್ದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ನಿರ್ವಹಿಸಿದರು.