Advertisement

ಲಾಕ್‌ಡೌನ್‌ ಸಡಿಲಿಕೆ ದುರಂತಕ್ಕೆ ಆಹ್ವಾನ: ಎಚ್‌.ಕೆ.ಪಾಟೀಲ್‌

09:31 PM Apr 25, 2020 | Sriram |

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆ ನಿರ್ಣಯ ಶ್ರೀಮಂತರ ಪರವಾಗಿದ್ದು ಈ ನಿರ್ಣಯಗಳಿಂದ ರಾಜ್ಯಕ್ಕೆ ತಾವು ದುರಂತಮಯ ಸನ್ನಿವೇಶ ತಂದೊಡ್ಡಿದ ಅಪಕೀರ್ತಿಗೆ ಪಾತ್ರರಾಗುತ್ತೀರಿ. ತತ್‌ಕ್ಷಣ ಈ ನಿರ್ಧಾರವನ್ನು ಕೈಬಿಡಬೇಕೆಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

Advertisement

ಈ ಕುರಿತು ಸಿಎಂಗೆ ಪತ್ರ ಬರೆದಿರುವ ಅವರು, ಹಳಿತಪ್ಪಿರುವ ಅರ್ಥವ್ಯವಸ್ಥೆಯನ್ನು ಮರಳಿ ಅಭಿವೃದ್ಧಿ ಪಥದತ್ತ ಚಲಿಸುವಂತೆ ಮಾಡಲು ಕೇವಲ ಲಾಕ್‌ಡೌನ್‌ ಸಡಿಲಿಕೆ ಉಪಾಯವಾಗುವುದಿಲ್ಲ. ಇದರಿಂದ ಆದಾಯವನ್ನು ಕ್ರೋಡೀಕರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 29,512 ಜನರನ್ನು ಪರೀಕ್ಷೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಸರಕಾರ ಬೆನ್ನು ತಟ್ಟಿಕೊಳ್ಳುತ್ತಿದೆ. ಇದು ಸುಳ್ಳು ಸಮರ್ಥನೆಯಾಗಿದೆ. ರಾಜ್ಯದಲ್ಲಿ ಕ್ವಾರಂಟೈನ್‌ ಆಗಿರುವ ಕನಿಷ್ಠ ಮೂರು ಲಕ್ಷ ಜನರಲ್ಲಿ ಮೂವತ್ತು ಸಾವಿರ ಜನರನ್ನಷ್ಟೇ ಈವರೆಗೆ ಕೋವಿಡ್‌ ತಪಾಸಣೆಗೆ ಗುರಿಪಡಿಸಲಾಗಿದೆ. ತಪಾಸಣೆಗಳೇ ನಡೆಯದೇ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ ಎನ್ನುವುದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ ಎಂದವರು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next