Advertisement

IOA; ಅಮಾನತುಗೊಂಡ WFI ವ್ಯವಹಾರ ನಡೆಸಲು ತ್ರಿಸದಸ್ಯ ತಾತ್ಕಾಲಿಕ ಸಮಿತಿ

06:08 PM Dec 27, 2023 | Team Udayavani |

ಹೊಸದಿಲ್ಲಿ: ಕ್ರೀಡಾ ಸಚಿವಾಲಯದಿಂದ ಅಮಾನತುಗೊಂಡಿರುವ ರಾಷ್ಟ್ರೀಯ ಕುಸ್ತಿ ಸಂಸ್ಥೆಯ(WFI) ದೈನಂದಿನ ವ್ಯವಹಾರಗಳನ್ನು ನಡೆಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(IOA ) ಬುಧವಾರ ತ್ರಿಸದಸ್ಯರ ತಾತ್ಕಾಲಿಕ ಸಮಿತಿಯನ್ನು ರಚಿಸಿದೆ.

Advertisement

ಬೃಜ್ ಭೂಷಣ್ ಸಿಂಗ್ ನಿಷ್ಠ ಸಂಜಯ್ ಸಿಂಗ್ ಅಧ್ಯಕ್ಷರಾಗಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ ಮೂರು ದಿನಗಳ ಬಳಿಕ,ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ತನ್ನದೇ ಆದ ಸಂವಿಧಾನದ ನಿಬಂಧನೆಗಳನ್ನು ಅನುಸರಿಸದಿದ್ದಕ್ಕಾಗಿ ರಾಷ್ಟ್ರೀಯ ಕುಸ್ತಿ ಸಂಸ್ಥೆಯನ್ನು ಅಮಾನತು ಮಾಡಲಾಗಿತ್ತು.

ವುಶು ಅಸೋಸಿಯೇಷನ್ ​​ಆಫ್ ಇಂಡಿಯಾ ಅಧ್ಯಕ್ಷ ಭೂಪಿಂದರ್ ಸಿಂಗ್ ಬಾಜ್ವಾ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಹಾಕಿ ಒಲಿಂಪಿಯನ್ ಎಂಎಂ ಸೋಮಯ ಮತ್ತು ಮಾಜಿ ಅಂತಾರಾಷ್ಟ್ರೀಯ ಶಟ್ಲರ್ ಮಂಜುಷಾ ಕನ್ವರ್ ಇತರ ಇಬ್ಬರು ಸದಸ್ಯರಾಗಿರಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next