Advertisement
ಇತ್ತಂಡಗಳನ್ನು ಕಾಂಗರೂ ನಾಡಿನ ಆಟಗಾರರು ಮುನ್ನಡೆಸುತ್ತಿರುವುದು ಈ ಪಂದ್ಯದ ವಿಶೇಷ. ಸ್ಟೀವನ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ಪಡೆಗಳಿಲ್ಲಿ ಮುಖಾಮುಖೀ ಆಗಲಿವೆ. ಅ. 11ರ ಮೊದಲ ಸುತ್ತಿನ ಪಂದ್ಯದಲ್ಲಿ ರಾಜಸ್ಥಾನ್ 5 ವಿಕೆಟ್‌ಗಳ ಜಯ ಸಾಧಿಸಿತ್ತು. ಇದಕ್ಕೆ ಸೇಡು ತೀರಿಸಿಕೊಂಡರೆ ಹೈದರಾಬಾದ್ ಒಂದು ಸ್ಥಾನ ಮೇಲೇರಿ ಆರಕ್ಕೆ ತಲಪುವ ಸಾಧ್ಯತೆ ಇದೆ.
ಕಳೆದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸಂಘಟಿತ ಪ್ರದರ್ಶನ ನೀಡಿ ಭರ್ಜರಿ ಗೆಲುವು ಸಾಧಿಸಿ ಸ್ಮಿತ್ ಪಡೆ ಸಹಜವಾಗಿಯೇ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. 10 ಪಂದ್ಯಗಳಿಂದ 8 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಆದರೆ ಇನ್ನುಳಿದ ನಾಲ್ಕೂ ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆಲ್ಲಬೇಕಿದೆ. ಆರಂಭದ ಕೆಲವು ಪಂದ್ಯಗಳಲ್ಲಿ ಸ್ಫೋಟಕ ಆಟವಾಡಿದ ಕೇರಳದ ಸ್ಟಂಪರ್ ಸಂಜು ಸ್ಯಾಮ್ಸನ್ ಅನಂತರ ವಿಫಲರಾಗಿರುವುದು ಹಾಗೂ ರಾಬಿನ್ ಉತ್ತಪ್ಪ ಅವರ ಬ್ಯಾಟಿಂಗ್ ಬರಗಾಲ ತೀವ್ರಗೊಂಡಿರುವುದು ರಾಜಸ್ಥಾನ್ ಪಾಲಿನ ಚಿಂತೆಯ ಸಂಗತಿಯಾಗಿದೆ. ಉತ್ತಪ್ಪ ಬದಲು ಮನನ್ ವೋಹ್ರ ಅವಕಾಶ ಪಡೆದರೂ ಅಚ್ಚರಿ ಇಲ್ಲ.
Related Articles
Advertisement
ಸಂಭಾವ್ಯ ತಂಡಗಳುರಾಜಸ್ಥಾನ್: ರಾಬಿನ್ ಉತ್ತಪ್ಪ, ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸನ್, ಸ್ಟೀವನ್ ಸ್ಮಿತ್ (ನಾಯಕ), ಜಾಸ್ ಬಟ್ಲರ್, ರಿಯಾನ್ ಪರಾಗ್, ರಾಹುಲ್ ತೆವಾತಿಯಾ, ಜೋಫ್ರ ಆರ್ಚರ್, ಶ್ರೇಯಸ್ ಗೋಪಾಲ್, ಅಂಕಿತ್ ರಜಪೂತ್, ಕಾರ್ತಿಕ್ ತ್ಯಾಗಿ. ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಜಾನಿ ಬೇರ್‌ಸ್ಟೊ, ಮನೀಷ್ ಪಾಂಡೆ, ಕೇನ್ ವಿಲಿಯಮ್ಸನ್/ಜಾಸನ್ ಹೋಲ್ಡರ್, ಪ್ರಿಯಂ ಗರ್ಗ್, ವಿಜಯ್ ಶಂಕರ್, ಅಬ್ದುಲ್ ಸಮದ್, ರಶೀದ್ ಖಾನ್, ಸಂದೀಪ್ ಶರ್ಮ, ಟಿ. ನಟರಾಜನ್, ಬಾಸಿಲ್ ಥಂಪಿ. ಪ್ರಯೋಗ ಸಲ್ಲದು
ಕಳೆದ ಪಂದ್ಯದಲ್ಲಿ ಹೈದರಾಬಾದ್ ನಾಯಕ ವಾರ್ನರ್ ಕೆಲವು ಪ್ರಯೋಗ ಮಾಡಿ ಕೈ ಸುಟ್ಟುಕೊಂಡಿದ್ದರು. ಸ್ವತಃ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ತಂಡವನ್ನು ದಡ ಮುಟ್ಟಿಸುವಲ್ಲಿ ವಿಫಲರಾಗಿದ್ದರು. ವಾರ್ನರ್ ಮತ್ತೆ ಇಂಥ ಪ್ರಯೋಗ ನಡೆಸಿದರೆ ಅದರಿಂದ ತಂಡಕ್ಕೆ ಹಾನಿಯಾಗುವ ಸಂಭವವೇ ಹೆಚ್ಚು. ಪವರ್ ಪ್ಲೇಯಲ್ಲಿ ದಾಖಲಾಗುವ ಮೊತ್ತವೇ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುವ ಕಾರಣ ವಾರ್ನರ್-ಬೇರ್‌ಸ್ಟೊ ಆರಂಭಿಕರಾಗಿ ಕಣಕ್ಕಿಳಿಯುವುದೇ ಸೂಕ್ತವೆನಿಸುತ್ತದೆ. ಅಫ್ಘಾನ್ ಸ್ಪಿನ್ನರ್ ರಶೀದ್ ಖಾನ್ ಹೊರತುಪಡಿಸಿ ಘಾತಕ ಸ್ಪೆಲ್ ನಡೆಸುವಂಥ ಬೌಲರ್ ಹೈದರಾಬಾದ್ ತಂಡದಲ್ಲಿ ಕಾಣುತ್ತಿಲ್ಲ. ಹೀಗಾಗಿ ಅತ್ಯುತ್ತಮ ಮಟ್ಟದ ಬ್ಯಾಟಿಂಗ್ ಪ್ರದರ್ಶನವಷ್ಟೇ ತಂಡದ ಕೈ ಹಿಡಿಯಬೇಕಿದೆ.