ಹೊಸದಿಲ್ಲಿ: ಟಾಟಾ ಐಪಿಎಲ್ 2022 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಸ್ಟಾರ್ ಆಟಗಾರನ ಗಾಯದ ಸಮಸ್ಯೆ ಎದುರಾಗಿದೆ. ಸೂರ್ಯಕುಮಾರ್ ಯಾದವ್ ಗಾಯಾಳಾಗಿರುವ ಕಾರಣ ಮಾ. 27ರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡುವುದು ಅನುಮಾನ ಎನ್ನಲಾಗಿದೆ.
ಹೆಬ್ಬೆರಳಿನ ಗಾಯಕ್ಕೊಳಾಗಿರುವ ಸೂರ್ಯಕುಮಾರ್ ಯಾದವ್ ಚೇತರಿಕೆಗೆ ಇನ್ನೂ ಸ್ವಲ್ಪ ಸಮಯ ಬೇಕಿದೆ. ಹೀಗಾಗಿ ಅವರಿಗೆ ಮೊದಲ ಐಪಿಎಲ್ ಪಂದ್ಯದಲ್ಲಿ ಆಡಲು ಸಾಧ್ಯವಿಲ್ಲ. 2ನೇ ಅಥವಾ 3ನೇ ಪಂದ್ಯದ ವೇಳೆ ಸಂಪೂರ್ಣ ಫಿಟ್ ಆಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.
ಸೂರ್ಯಕುಮಾರ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್‌ನೆಸ್ ತರಬೇತಿ ಪಡೆಯುತ್ತಿದ್ದು, ಗಾಯದಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ.
ಇದನ್ನೂ ಓದಿ:ವನಿತಾ ವಿಶ್ವಕಪ್: ಕಾಂಗರೂ ನಾಲ್ಕನೇ ಗೆಲುವಿನ ನಾಗಾಲೋಟ
ಮುಂಬೈ ತನ್ನ ಎರಡನೇ ಪಂದ್ಯವನ್ನು ಎ. 2ರಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಈ ಪಂದ್ಯದ ಮೂಲಕ ಸೂರ್ಯಕುಮಾರ್ ಕಣಕ್ಕಿಳಿಯುವ ನಿರೀಕ್ಷೆಯಿದೆ ಎಂದು ತಂಡದ ಮೂಲಗಳು ತಿಳಿಸಿವೆ.