Advertisement

IPL; ರಿಷಭ್‌ ಪಂತ್‌ ಪುನರಾಗಮನ ಭಾವುಕ ಕ್ಷಣಕ್ಕೆ ಸಾಕ್ಷಿ: ವಿಡಿಯೋ ನೋಡಿ

05:32 PM Mar 23, 2024 | Team Udayavani |

ಚಂಡೀಗಢ: ಭೀಕರ ಅಪಘಾತದಲ್ಲಿ ಗಾಯಗೊಂಡು 15 ತಿಂಗಳ ಕಾಲ ಅಜ್ಞಾತವಾಸದಲ್ಲಿದ್ದ ರಿಷಭ್‌ ಪಂತ್‌ ಅವರು ಸಂಪೂರ್ಣವಾಗಿ ಚೇತರಿಸಿಕೊಂಡು, 454 ದಿನಗಳ ಬಳಿಕ ಸ್ಪರ್ಧಾತ್ಮಕ ಕ್ರಿಕೆಟಿಗೆ ಶನಿವಾರ ಮರಳಿದ್ದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು.

Advertisement

ಚಂಡೀಗಢದ ಮುಲ್ನಾಪುರದಲ್ಲಿ ನೂತನವಾಗಿ ನಿರ್ಮಿಸಲಾದ “ಮಹಾರಾಜ ಯಾದವೀಂದ್ರ ಸಿಂಗ್‌ ಇಂಟರ್‌ನ್ಯಾಶನಲ್‌ ಸ್ಟೇಡಿಯಂ’ನಲ್ಲಿ ಶನಿವಾರದ ಐಪಿಎಲ್‌ ಮುಖಾಮುಖಿಯಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ಪಂತ್‌ ಬ್ಯಾಟಿಂಗ್ ಗೆ ಬರುತ್ತಿದ್ದಂತೆ ಎಲ್ಲರೂ ಎದ್ದು ನಿಂತು ಗೌರವಿಸಿದರು. ಇದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು.

ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಡೆಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಪಂತ್13 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. 2 ಬೌಂಡರಿಗಳನ್ನು ಅವರು ಬಾರಿಸಿದರು. ವಾರ್ನರ್ 29, ಮಿಚೆಲ್ ಮಾರ್ಷ್ 20, ಶಾಯ್ ಹೋಪ್ 33, ಅಕ್ಷರ್ ಪಟೇಲ್ 21 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ಅಭಿಷೇಕ್ ಪೊರೆಲ್ 10 ಎಸೆತಗಳಲ್ಲಿ 32 ರನ್ ಚಚ್ಚಿ ಔಟಾಗದೆ ಉಳಿದು ಗಮನ ಸೆಳೆದರು.

Advertisement

Udayavani is now on Telegram. Click here to join our channel and stay updated with the latest news.

Next