Advertisement

ದಕ್ಷಿಣ ಕನ್ನಡ : ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾಗಿಯಾದ 16 ಮಂದಿ ಬಂಧನ, ಸೊತ್ತು ವಶಕ್ಕೆ

04:50 PM Oct 29, 2020 | sudhir |

ಮಂಗಳೂರು : ಮಂಗಳೂರಿನಲ್ಲಿ ಐಪಿಎಲ್‌ ಸಂಬಂಧ ಕ್ರಿಕೆಟ್‌ ಬೆಟ್ಟಿಂಗ್‌ ನಡೆಯುತ್ತಿರುವ ವಿಚಾರ ಪೊಲೀಸ್‌ ಇಲಾಖೆಯ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಡಿಸಿಪಿ ಅರುಣಾಂಶುಗಿರಿ ಹಾಗೂ ವಿನಯ್‌ ಎ. ಗಾಂವ್ಕರ್‌ ನೇತೃತ್ವದಲ್ಲಿ ಸಿಸಿಬಿ ತಂಡವು ನಗರದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ 4 ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣ ದಾಖಲಿಸಿಕೊಂಡಿದೆ. 3 ಪ್ರಕರಣಗಳು ಮಂಗಳೂರು ನಗರ ಉತ್ತರ ಪೊಲೀಸ್‌ ಠಾಣೆ ಹಾಗೂ 1 ಪ್ರಕರಣ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಈ ಎಲ್ಲ ಪ್ರಕರಣದಲ್ಲಿ ಒಟ್ಟು 16 ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ 28 ಮೊಬೈಲ್‌ ಹಾಗೂ 8 ಲಕ್ಷ ರೂ. ಮೌಲ್ಯದ 1 ಕಾರು ಹಾಗೂ 2,67,100 ರೂ. ನಗದು ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Advertisement

ಮಂಗಳೂರು ನಗರದಲ್ಲಿ ಯಾವುದೇ ರಿಕ್ರಿಯೇಶನ್‌ ಕ್ಲಬ್‌ಗಳನ್ನು ತೆರೆಯಲು ಅನುಮತಿ ಕೋರಿ ಯಾರೂ ಅರ್ಜಿ ಸಲ್ಲಿಸಿಲ್ಲ ಹಾಗೂ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಲು ಪೊಲೀಸ್‌ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ ಎಂದು ಮಂಗಳೂರು ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ:ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್

ನಗರದಲ್ಲಿ ಯಾವುದಾದರೂ ಅನಧಿಕೃತ ಕ್ಲಬ್‌ಗಳು ನಡೆಯುತ್ತಿರುವುದರ ಅಥವಾ ಯಾವುದೇ ರೀತಿಯ ಕ್ರಿಕೆಟ್‌ ಬೆಟ್ಟಿಂಗ್‌ ನಡೆಯುತ್ತಿರುವ ಮಾಹಿತಿ ಸಾರ್ವಜನಿಕರಿಗೆ ಇದ್ದಲ್ಲಿ ಪೊಲೀಸ್‌ ಇಲಾಖೆಗೆ ನೀಡಬೇಕು ಹಾಗೂ ಮಾಹಿತಿಯನ್ನು ನೀಡಿದವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್‌ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next