Advertisement

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಸಿಸಿಬಿ ಪೊಲೀಸರಿಂದ ಬೆಳಗಾವಿಯಲ್ಲಿ ಬುಕ್ಕಿಯ ಬಂಧನ

08:18 PM Apr 04, 2022 | Team Udayavani |

ಬೆಳಗಾವಿ : ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಪಂಜಾಬ್ ಕಿಂಗ್ಸ್ ಮಧ್ಯೆ ನಡೆದ ಐಪಿಎಲ್ ಕ್ರಿಕೆಟ್ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಬುಕ್ಕಿಯನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

Advertisement

ಇಲ್ಲಿಯ ಮಜಗಾವಿಯ ಪವನ್ ಕಾಕತ್ಕರ್(32) ಎಂಬ ಬೆಟ್ಟಿಂಗ್ ಬುಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 15,500 ರೂ. ನಗದು ಹಣ, ಬೆಟ್ಟಿಂಗ್ ವಿವರ ಬರೆದ ಕಾಗದ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಇನ್ಸ್ಪೆಕ್ಟರ್ ನಿಂಗನಗೌಡ ಪಾಟೀಲ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಈ ಕುರಿತು ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಯುಗಾದಿ ಹಬ್ಬ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅಪಘಾತ : ಪತಿ ಸಾವು, ಪತ್ನಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next