ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರ್‌ಸಿಬಿ ಮತ್ತು ಸಿಎಸ್‌ಕೆ ಪಂದ್ಯಗಳ ನಡುವೆ ಬೆಟ್ಟಿಂಗ್ ಆಡುತ್ತಿದ್ದ ಬಸವನಗುಡಿ ನಿವಾಸಿ ಇರ್ಫಾನ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ ಮೂರು ಲಕ್ಷ ರೂ. ನಗದು ಮತ್ತು ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ.
ಆರೋಪಿ ಮಂಗಳವಾರ ಬಸವನಗುಡಿಯ ಗಾಂಧಿ ಬಜಾರ್ ಮುಖ್ಯರಸ್ತೆ ಪುಟ್ಟಣ ರಸ್ತೆಯ ಶೋರೂಂ ಎದುರು ಐಪಿಎಲ್ ಕ್ರಿಕೆಟ್ ಸರಣಿಯ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳ ನಡುವಿನ ಪಂದ್ಯದ ಸೋಲು-ಗೆಲುವು ಕುರಿತು ಬೆಟ್ಟಿಂಗ್ ಆಡುತ್ತಿದ್ದ. ಈ ಬಗ್ಗೆ ಮಾಹಿತಿ ದೊರೆತ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ಲೋಟಸ್ 247 ಎಂಬ ವೆಬ್‌ಸೈಟ್‌ನಲ್ಲಿ ಬೆಟ್ಟಿಂಗ್ ರೇಶ್ಯೂವನ್ನು ನೋಡಿಕೊಂಡು ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ಆಡಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಮತ್ತೊಂದು ಪ್ರಕರಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಲಖನೌ ಸೂಪರ್ ಗೇಟ್ಸ್ ತಂಡಗಳ ನಡುವೆ ಬೆಟ್ಟಿಂಗ್ ಆಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಹಾಲಕ್ಷ್ಮೀ ಲೇಔಟ್ ನಿವಾಸಿಗಳಾದ ಯೋಗೀಶ್(32), ಅನುದೀಪ್ (24) ಮತ್ತು ಸುದನ್ (30) ಬಂಧಿತರು.
ಆರೋಪಿಗಳಿಂದ ಮೂರು ಮೊಬೈಲ್ ಗಳು, 2 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಆರೋಪಿಗಳು ಸ್ಟಾಟ್ಸ್‌ಪೋರ್ಟ್.ಕಾಂ ಮತ್ತು 4ರ್ಯಾಬಿಟ್.ಕಾಂ ವೆಬ್‌ಸೈಟ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.