ಮುಂಬೈ: ಸದ್ಯ 17ನೇ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಡೆಯುತ್ತಿದೆ. ಮುಂದಿನ ಸೀಸನ್ ನಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ. ಅಂದರೆ ತಂಡಗಳು ತಮ್ಮಲ್ಲಿ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಂಡು ಉಳಿದವರನ್ನು ಕೈಬಿಡಬಹುದು. ಹರಾಜಿನಲ್ಲಿ ಹೊಸ ತಂಡವನ್ನು ಕಟ್ಟಬೇಕಾಗುತ್ತದೆ.
ಕಳೆದೊಂದು ದಶಕದಿಂದ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಮುಂದಿನ ಹರಾಜಿನ ಭಾಗವಾಗಲಿದ್ದಾರೆ ಎನ್ನುತ್ತಿದೆ ವರದಿ. ಅವರು ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲು ಬಯಸಿದ್ದಾರೆ ಎನ್ನುವ ವರದಿಗಳು ಬರುತ್ತಿದೆ.
ನ್ಯೂಸ್ 24 ರ ವರದಿಯ ಪ್ರಕಾರ, ರೋಹಿತ್ ಶರ್ಮಾ ಈ ಎಲ್ಲಾ ವರ್ಷಗಳ ನಂತರ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿದೆ. ಅದೇ ವರದಿಯ ಪ್ರಕಾರ, ಮುಂದಿನ ಐಪಿಎಲ್ ಹರಾಜಿಗೂ ರೋಹಿತ್ ಲಭ್ಯವಿರುತ್ತಾರೆ. ಅದೇ ವರದಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದಿಂದ ರೋಹಿತ್ ಗೆ ಸ್ವಲ್ಪವೂ ಸಂತೋಷವಾಗಿಲ್ಲ ಮತ್ತು ಡ್ರೆಸ್ಸಿಂಗ್ ರೂಮ್ ನಲ್ಲಿಯೂ ಭಿನ್ನಾಭಿಪ್ರಾಯವಿದೆ, ಇದರಿಂದಾಗಿ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿದೆ ಎಂದು ಎಂಐ ಆಟಗಾರರೊಬ್ಬರು ತಿಳಿಸಿದ್ದಾರೆ. ಹಲವಾರು ನಿರ್ಧಾರಗಳಿಗೆ ಸಂಬಂಧಿಸಿದಂತೆ ಇಬ್ಬರು ಆಟಗಾರರ ನಡುವೆ ಸಾಕಷ್ಟು ವಾದಗಳು ನಡೆಯುತ್ತಿವೆ, ಇದು ಡ್ರೆಸ್ಸಿಂಗ್ ರೂಮ್‌ನಲ್ಲಿಯೂ ಕಳಪೆ ವಾತಾವರಣವನ್ನು ಉಂಟುಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
2011ರ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೇರಿದ ರೋಹಿತ್ ಶರ್ಮಾ ಅವರು ತಂಡದ ನಾಯಕತ್ವ ವಹಿಸಿದ್ದರು. 2013, 2015, 2017, 2019 ಮತ್ತು 2020ರಲ್ಲಿ ಅವರ ನಾಯಕತ್ವದಲ್ಲಿ ಮುಂಬೈ ಕಪ್ ಗೆದ್ದುಕೊಂಡಿತ್ತು. ಆದರೆ 2024ರಲ್ಲಿ ರೋಹಿತ್ ರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿದೆ.