Advertisement
ವಿಶ್ವಕಪ್‌ಗೆ ತಂಡ ಆಯ್ಕೆ ಮಾಡುವ ಸಂದರ್ಭ ಎಂ.ಎಸ್.ಕೆ. ಪ್ರಸಾದ್ ಹಾಗೂ ಅವರ ತಂಡ 12ನೇ ಆವೃತ್ತಿಯ ಐಪಿಎಲ್‌ನ ಮೊದಲ ತಿಂಗಳ ಪಂದ್ಯಗಳನ್ನು ಗಂಭೀರವಾಗಿ ಪರಿಗಣಿಸಲಿದೆ. ಇಲ್ಲಿ ಆಟಗಾರರು ನೀಡುವ ಪ್ರದರ್ಶನ ಮೇಲೆ ತಂಡ ರಚನೆ ಮಾಡಲಿದ್ದಾರೆ ಎಂಬ ವಿಷಯವನ್ನು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.
“ಕಳೆದ ಆಸ್ಟ್ರೇಲಿಯ ವಿರುದ್ಧದ ಏಕದಿನ ಟೂರ್ನಿಯ ವೇಳೆ ತಂಡದಲ್ಲಿ ಬಹಳಷ್ಟು ಪ್ರಯೋಗಗಳನ್ನು ಮಾಡಲಾಗಿದೆ. 4ನೇ ಕ್ರಮಾಂಕದ ಆಟಗಾರ ಯಾರು ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಇದಕ್ಕಾಗಿ 4 ಆಟಗಾರರು ಪೈಪೋಟಿ ನಡೆಸುತ್ತಿದ್ದು, ಐಪಿಎಲ್‌ನಲ್ಲಿ ಆಟಗಾರರು ನೀಡುವ ಪ್ರದರ್ಶನದ ಮೇಲೆ ಈ ಸ್ಥಾನಕ್ಕೆ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ವಿಶ್ವಕಪ್ ತಂಡ ನಿರ್ಧರಿಸಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಆ ಸರಣಿಯಿಂದ ಯಾವುದೇ ಪ್ರಯೋಜನವಾಗಲಿಲ್ಲ, ಬದಲಾಗಿ ಇನ್ನಷ್ಟು ಸಮಸ್ಯೆಗಳಿಗೆ ಕಾರಣವಾಗಿದೆ. ವಿಶ್ವಕಪ್ ತಂಡಕ್ಕೆ ನಾಲ್ವರು ಬ್ಯಾಟ್ಸ್‌ಮನ್, ಒಬ್ಬರು ಅಥವಾ ಇಬ್ಬರು ಆಲ್‌ರೌಂಡರ್, 5 ಅಥವಾ 6 ಬೌಲರ್‌ಗಳನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿಕೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.