Advertisement

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

11:26 PM Mar 28, 2024 | Team Udayavani |

ಜೈಪುರ : ಇಲ್ಲಿನ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ ಸಾಧಿಸಿತು.

Advertisement

ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ರಾಜಸ್ಥಾನ್ 5 ವಿಕೆಟ್ ನಷ್ಟಕ್ಕೆ 185 ರನ್ ಕಲೆ ಹಾಕಿತು. ಅಮೋಘ ಆಟವಾಡಿದ ರಿಯಾನ್ ಪರಾಗ್ ಔಟಾಗದೆ 45 ಎಸೆತಗಳಲ್ಲಿ 84 ರನ್ ಸಿಡಿಸಿದರು.

ಗುರಿ ಬೆನ್ನಟ್ಟಿದ ಡೆಲ್ಲಿ 5 ವಿಕೆಟ್ ನಷ್ಟಕ್ಕೆ 173 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಕೊನೆಯ ಓವರ್ ನಲ್ಲಿ 17 ರನ್ ಗಳ ಅಗತ್ಯವಿತ್ತು. ಅವೇಶ್ ಖಾನ್ ಬಿಗಿ ದಾಳಿ ನಡೆಸಿದರು. 4 ರನ್ ಮಾತ್ರ ಬಿಟ್ಟು ಕೊಟ್ಟರು. ಟ್ರಿಸ್ಟನ್ ಸ್ಟಬ್ಸ್ ಮತ್ತು ಅಕ್ಷರ್ ಪಟೇಲ್ ಅವರಿಗೆ ಗೆಲುವು ತಂದುಕೊಡುವುದು ಸಾಧ್ಯವಾಗಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next