Advertisement

ಮಧುಕರ್ ಶೆಟ್ಟಿ ಸಾವಿನ ಬಗ್ಗೆ ತನಿಖೆ ನಡೆಸಬೇಕು: ಡಿಕೆ ಶಿವಕುಮಾರ್

07:24 AM Dec 29, 2018 | Sharanya Alva |

ಬೆಂಗಳೂರು: ಎಚ್ 1ಎನ್ 1 ಕಾಯಿಲೆಯಿಂದ ವಾರದಿಂದ ಬಳಲುತ್ತಿದ್ದ ಕುಂದಾಪುರ ಮೂಲದ ಐಪಿಎಸ್ ಅಧಿಕಾರಿ ಡಾ.ಮಧುಕರ್ ಶೆಟ್ಟಿ(47ವರ್ಷ) ಅವರ ಸಾವಿನ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Advertisement

ಶನಿವಾರ ಮಧುಕರ್ ಶೆಟ್ಟಿ ಅವರ ನಿಧನ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಡಿಕೆಶಿ, ಅವರು ತುಂಬಾ ಪ್ರಾಮಾಣಿಕ ಅಧಿಕಾರಿಯಾಗಿದ್ದರು, ನನಗೆ ಆಪ್ತರೂ ಕೂಡ. ಅವರ ತಂದೆಯವರ ಜೊತೆಯೂ ನಾನು ಒಡನಾಟ ಇಟ್ಟುಕೊಂಡಿದ್ದೆ. ಮಧುಕರ್ ಅವರ ಸಾವು ಸ್ವಾಭಾವಿಕ ಹೌದೋ ಅಥವಾ ಅಲ್ಲವೋ ಎಂಬ ಬಗ್ಗೆ ತನಿಖೆ ನಡೆಯಬೇಕು ಎಂದರು.

ಖ್ಯಾತ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಪುತ್ರ ಮಧುಕರ್ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಹೈದರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಮಧುಕರ್ ಶೆಟ್ಟಿ ಅವರು ಹೈದರಾಬಾದ್ ನ ಸರ್ದಾರ್ ವಲ್ಲಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಧುಕರ್ ಅವರು ಪತ್ನಿ,ಮಗಳು ಮತ್ತು ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next