ತೆಹ್ರಾನ್: ಹಿಜಾಬ್ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಗೆ ಇರಾನ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.
Advertisement
ಸರಕಾರಕ್ಕೆ ಸೇರಿದ ವಸ್ತುಗಳನ್ನು ಸುಟ್ಟು ಹಾಕಿದ ಹಿನ್ನೆಲೆಯಲ್ಲಿ ಹಾಗೂ ದೇಶದ ವಿರುದ್ಧ ಯುದ್ಧ ಸಾರಿದ ಆರೋಪಕ್ಕಾಗಿ ತೆಹ್ರಾನ್ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದೆ.
ಪ್ರತಿಭಟನೆಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. “ಕನಿಷ್ಠ 20 ಮಂದಿ ಮರಣದಂಡನೆ ವಿಧಿಸಬಹುದಾದ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಈ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯವು ಕೂಡಲೇ ಕ್ರಮ ಕೈಗೊಳ್ಳಬೇಕು,’ ಎಂದು ನಾರ್ವೆ ಮೂಲದ ಇರಾನ್ ಮಾನವ ಹಕ್ಕುಗಳ ಸಂಸ್ಥೆ ಆಗ್ರಹಿಸಿದೆ.