ಹೊಸದಿಲ್ಲಿ : ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಇಂದು ಗುರವಾರ ಇಲ್ಲಿನ ಪಟಿಯಾಲಾ ಹೌಸ್ ಕೋರ್ಟ್, IRCTC (India Railway Catering and Tourism Corporation) ಹಗರಣ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಿತು.
ಬಹು ಕೋಟಿ ಮೇವು ಹಗರಣದಲ್ಲಿ ಪ್ರಕೃತ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಲಾಲು ಯಾದವ್ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೋರ್ಟ್ ಮುಂದೆ ಹಾಜರಾಗಿದ್ದರು.
ಇದೇ ವೇಳೆ ನ್ಯಾಯಾಲಯವು ಸಿಬಿಐ ದಾಖಲಿಸಿರುವ ಈ ಪ್ರಕರಣದ ವಿಚಾರಣೆಯನ್ನು ಜನವರಿ 19ಕ್ಕೆ ಮುಂದೂಡಿತು.
ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ತೇಜಸ್ವಿ ಯಾದವ್ ಅವರು ಕೂಡ ಇಂದು ಗುರುವಾರ ಐಆರ್‌ಸಿಟಿಸಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟಿಗೆ ಹಾಜರಾದರು.
ಐಆರ್‌ಸಿಟಿಸಿ ಹಗರಣ ಪ್ರಕರಣದ ಮುಖ್ಯ ಆರೋಪಿಗಳನ್ನಾಗಿ ಜಾರಿ ನಿರ್ದೇಶನಾಲಯವು ಆರ್‌ಜೆಡಿ ಮುಖ್ಯಸ್ಥ ಲಾಲು, ಅವರ ಪತ್ನಿ ರಾಬ್ರಿ ದೇವಿ ಮತ್ತು ಬಿಹಾರ ಅಸೆಂಬ್ಲಿಯಲ್ಲಿನ ವಿಪಕ್ಷ ನಾಯಕ ತೇಜಸ್ವಿ ಯಾದವ್ ಮತ್ತು ಇತರರನ್ನು ಹೆಸರಿಸಿತ್ತು.