Advertisement

ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ: ಕ್ರಮಕ್ಕೆ ಒತ್ತಾಯ

04:42 PM Oct 01, 2019 | Suhan S |

ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ 2010-11ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆದಿದ್ದು ಅವ್ಯವಹಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿ ಕರವೇ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

Advertisement

ಕರವೇ ತಾಲೂಕು ಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿ, ಅಧಿಕಾರಿಗಳು ವಸತಿ ಫಲಾನುಭವಿಗಳಿಂದ ಫಾರಂ-ಜಿಗೆ ಸಹಿ ಮಾಡಿಸಿಕೊಂಡು ಹಣ ಡ್ರಾ ಮಾಡಿಕೊಂಡು ವಸತಿ ಫಲಾನುಭವಿಗಳಿಗೆ ಹಣ ನೀಡದೆ ದುರುಪಯೋಗಪಡಿಸಿಕೊಂಡಿದ್ದಾರೆ.

ಕ್ಷೇತ್ರದಲ್ಲಿ 2010-11ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿ 7997 ಮನೆಗಳು ಮುಂಜೂರಾಗಿದ್ದವು. ಮನೆ ನಿರ್ಮಾಣದ ಜವಾಬ್ದಾರಿ ಹೊತ್ತ  ಕೆಆರ್‌ಐಡಿಎಲ್‌ ನವರು ಫಲಾನುಭವಿಗಳಿಗೆ ಸರಿಯಾಗಿ ಮನೆ ನಿರ್ಮಾಣ ಮಾಡಿಕೊಡದೆ ಫಲಾನುಭವಿಗಳ ಹಣವನ್ನು ಗುಳುಂ ಮಾಡಿದ್ದಾರೆ. ಬಸವ ವಸತಿ ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿದ್ದು, ಲೋಕಾಯುಕ್ತ ತನಿಖೆಯಲ್ಲಿ ತಪ್ಪೆಸಗಿರುವುದು ಸಾಬೀತಾಗಿರುವ ಅ ಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಶಾಸಕ ನೇಮರಾಜನಾಯ್ಕ ವಿರುದ್ಧ ಕೂಡ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ, ಮುಖಂಡರಾದ ಕೊಚಾಲಿ ಮಂಜುನಾಥ, ಗೋಣಿಬಸಪ್ಪ, ರಾಮಪ್ಪ, ಮಂಜುನಾಥ, ಜಂಬಣ್ಣ, ಯಲ್ಲಪ್ಪ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next