Advertisement

ಬೇಜವಾಬ್ದಾರಿ ಮೌಲ್ಯಮಾಪನ: ಕ್ರಮ

07:50 AM Jun 10, 2018 | Team Udayavani |

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯು ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವನ್ನು
ಬೇಜವಾಬ್ದಾರಿಯಿಂದ ನಡೆಸಿ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತಂದೊಡ್ಡಿರುವ ಮೌಲ್ಯಮಾಪಕರ ವಿರುದಟಛಿ ಸೂಕ್ತ ಕ್ರಮ ತೆಗೆದುಕೊಳ್ಳಲು ಎಸ್ಸೆಸ್ಸೆಲ್ಸಿ ಹಾಗೂ ಪಿಯು ಇಲಾಖೆ ಮುಂದಾಗಿದೆ.

Advertisement

ಮೌಲ್ಯಮಾಪಕರು ಮಾಡಿರುವ ಪ್ರಮಾದದಿಂದ ವಿದ್ಯಾರ್ಥಿಗಳ ಅಂಕಗಳಲ್ಲಿ ಹೆಚ್ಚಿನ ವ್ಯತ್ಯಾಸಗಳಾಗಿವೆ. ಇದು ಮಕ್ಕಳ ಭವಿಷ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ವಿದ್ಯಾರ್ಥಿಗಳು ಹಾಗೂ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನವನ್ನು ಸಮರ್ಥವಾಗಿ ನಿಭಾಯಿಸದ ಮೌಲ್ಯಮಾಪಕರ ವಿರುದಟಛಿ ಕಠಿಣ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿದ್ದಾರೆ. ಮೌಲ್ಯಮಾಪಕರಿಗೆ ದಂಡಶುಲ್ಕ ಹೆಚ್ಚಿಸುವ ಅಥವಾ ಅವರನ್ನು ಕಪ್ಪು ಪಟ್ಟಿಗೆ ಸೇರಿಸಿ ಭವಿಷ್ಯದಲ್ಲಿ ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಳ್ಳದಂತೆ ಮಾಡುವ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಯೋಚನೆ ನಡೆಯುತ್ತಿದೆ ಎಂದು ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯು ಫ‌ಲಿತಾಂಶದ ನಂತರ ಕಡಿಮೆ ಅಂಕ ಬಂದಿರುವ ಬಹುತೇಕ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮರು ಮೌಲ್ಯಮಾಪನದ ನಂತರ ಅಂಕಗಳಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿದೆ. ಎಸ್ಸೆಸ್ಸೆಲ್ಸಿಯ 2119 ಹಾಗೂ ಪಿಯುಸಿ 2451 ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಅಂಕದಲ್ಲಿ
ಹೆಚ್ಚಿನ ವ್ಯತ್ಯಾಸ ಬಹಿರಂಗಗೊಂಡಿದೆ. ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಯಲ್ಲಿ 20 ಹಾಗೂ ಪಿಯುಸಿ ಉತ್ತರ ಪತ್ರಿಕೆಯಲ್ಲಿ 38 ಅಂಕಗಳ ಗರಿಷ್ಠ ವ್ಯತ್ಯಾಸ ಮರು ಮೌಲ್ಯಮಾಪನದಿಂದ ಬೆಳಕಿಗೆ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next