Advertisement

ಜನ ಗುಳೆ ಹೋಗುವುದನ್ನ ತಪ್ಪಿಸಲು ನೀರಾವರಿ ಅಭಿವೃದ್ಧಿಯಾಗಬೇಕಿದೆ: ಸಿಎಂ

02:51 PM Aug 27, 2022 | Team Udayavani |

ರಾಯಚೂರು: ಶಿರಾ ಬಳಿ ಅಪಘಾತದಲ್ಲಿ ಗಾಯಗೊಂಡವರ ಚಿಕಿತ್ಸೆಗೆ ಬದಲಿ ವ್ಯವಸ್ಥೆ ಮಾಡಿದ್ದೇವೆ.ನಿಮಾನ್ಸ್ ನಲ್ಲಿ ಮೊದಲ ಪ್ರಾಶಸ್ತ್ಯದಲ್ಲಿ ಚಿಕಿತ್ಸೆ ನೀಡಲು ನಿಮಾನ್ಸ್ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಅವರ ಸಂಪೂರ್ಣ ವೆಚ್ಚ ನಾವೇ ಭರಿಸಲಿದ್ದೇವೆ. ಈ ಭಾಗದ ಜನ ಗುಳೆ ಹೋಗುವುದನ್ನ ತಪ್ಪಿಸಲು ನೀರಾವರಿ ಅಭಿವೃದ್ಧಿಯಾಗಬೇಕಿದೆ. ಇಲ್ಲಿನ ಇಂಡಸ್ಟ್ರಿ ಸೆಂಟರ್ ವಿಸ್ತರಣೆ ಮಾಡುತ್ತೇವೆ .ಇಲ್ಲಿನ ಜನರಿಗೆ ಹೆಚ್ಚು ಉದ್ಯೋಗ ಸಿಗುವ ದೃಷ್ಟಿಯಲ್ಲಿ ಗಾರ್ಮೆಂಟ್ ಉದ್ಯಮ ಬೆಳೆಯಬೇಕಿದೆ. ಬಳ್ಳಾರಿ ,ರಾಯಚೂರು ,ಕಲಬುರಗಿ ವಿಶೇಷ ಅಭಿವೃದ್ಧಿಗೆ ಕ್ರಮ ವಹಿಸಿದ್ದೇವೆ.ಕಲಬುರಗಿಗೆ ಟೆಕ್ಸ್ ಟೈಲ್ ಪಾರ್ಕ್ ಶಿಫಾರಸು ಮಾಡಿದ್ದೇವೆ.ರಾಜ್ಯದ ಕಾರ್ಯಕ್ರಮದ ಅಡಿ ರಾಯಚೂರಿಗೆ ಗಾರ್ಮೆಂಟ್ ಇಂಡಸ್ಟ್ರಿ ಅಭಿವೃದ್ಧಿ ಮಾಡುತ್ತೇವೆ ಎಂದರು.

ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ ನಿಟ್ಟಿನಲ್ಲಿ 9 ಯೋಜನೆ ‌ಕೈಗೆತ್ತಿಕೊಂಡಿದ್ದೇವೆ.ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಿಸುವ ಕುರಿತ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ನೋಟಿಫಿಕೇಷನ್ ಬಂದ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. 1 ಲಕ್ಷ 30 ಸಾವಿರ ಹೆಕ್ಟೇರ್ ಭೂ ಸ್ವಾಧೀನ ಹಾಗೂ 22 ಹಳ್ಳಿಗಳ ಸ್ಥಳಾಂತರ ಮಾಡಬೇಕು.ಈಗಾಗಲೇ ಹಳ್ಳಿಗಳ ಸ್ಥಳಾಂತರ ಪ್ರಕ್ರೀಯೆ ಆರಂಭವಾಗಿದೆ. ಅದಕ್ಕೆ 5 ಸಾವಿರ ಕೋಟಿ ಬೇಕಾಗುತ್ತೆ ಅದನ್ನು ಒದಗಿಸುತ್ತಿದ್ದೇನೆ ಎಂದರು.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಉನ್ನತ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ನಡೆಯುತಿದೆ. ನಾನು ಬೆಂಗಳೂರಿಗೆ ಹೋದ ಮೇಲೆ ಮುಂದಿನದನ್ನು ಹೇಳುತ್ತೇನೆ ಎಂದರು.

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತ ಶಿಕ್ಷಣ ಸಚಿವರು ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ದಾರೆ. ಮತ್ತೆ ನಾನು ಅದಕ್ಕೆ ಸ್ಪಷ್ಟೀಕರಣ ಕೊಡುವ ಅಗತ್ಯವಿಲ್ಲ. ಕಮಿಷನ್ ಆರೋಪದ ಬಗ್ಗೆ ಯಾವುದಾದರೂ ಕಾಮಗಾರಿಯಲ್ಲಿ ನಡೆದಿದೆ ಎನ್ನುವಾದರೆ ದಾಖಲೆ ಕೊಡಲಿ ತನಿಖೆ ಮಾಡಿಸುತ್ತೇವೆ ಎಂದರು.

Advertisement

ಹಾಸ್ಯಾಸ್ಪದ

ರಾಯಚೂರು ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ತೆಲಂಗಾಣ ಸಿಎಂ ಹೇಳಿಕೆ ಹಾಸ್ಯಾಸ್ಪದವಾಗಿದೆ.ಕೆಸಿಆರ್ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ.ತೆಲಂಗಾಣ ಇನ್ನೂ ಹಿಂದುಳಿದ ಪ್ರದೇಶವಾಗಿದೆ. ತೆಲಂಗಾಣ ಹಿಂದುಳಿದ ಕಾರಣಕ್ಕೆ ಪ್ರತ್ಯೇಕ ರಾಜ್ಯ ಮಾಡಲಾಗಿದೆ. ಮೊದಲು ಅವರು ತಮ್ಮ ರಾಜ್ಯದ ಅಭಿವೃದ್ಧಿ ಗೆ ಮುಂದಾಗಬೇಕು, ನಮ್ಮ ಒಂದಿಚು ಜಾಗವನ್ನು ನಾವು ಬಿಟ್ಟುಕೊಡುವುದಿಲ್ಲ ಎಂದರು.

ಕಳೆದ ಬಾರಿ ದೆಹಲಿಗೆ ಹೋದಾಗ ಕೇಂದ್ರ ಆರೋಗ್ಯ ಸಚಿವರಿಗೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಬಗ್ಗೆ ಮಾತನಾಡಿದ್ದೇನೆ. 371 ಜೆ ಇರುವ ಭಾಗ, ಮಹತ್ವಾಕಾಂಕ್ಷೆ ಜಿಲ್ಲೆ, ಅಪೌಷ್ಟಿಕತೆ ಇರುವ ಜಿಲ್ಲೆಗೆ ಏಮ್ಸ್ ನಂತ ಸಂಸ್ಥೆ ಬೇಕು ಅಂತ ಕೇಳಿದ್ದೇನೆ. ಅತೀ ಶೀಘ್ರದಲ್ಲಿ ಒಂದು ನಿರ್ಣಯ ಮಾಡುತ್ತೇವೆ ಅಂತ ಹೇಳಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next