-ಜೆಡಿಎಸ್ ನಾಯಕರ ಬೆನ್ನಿಗೆ ಚೂರಿ ಹಾಕಿದರು ಎಂಬ ಆರೋಪಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ಇದು.
Advertisement
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರವನ್ನು ಬೀಳಿಸಿದ ಬಿಜೆಪಿ ನಾಯಕರ ಜತೆಗೆ ತಬ್ಟಾಡುತ್ತಿದ್ದಾರೆ. ಇದನ್ನು ಆ ಮತದಾರರೇ ತೀರ್ಮಾನ ಮಾಡಬೇಕು ಎಂದರು.ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ. ಅಲ್ಲಿನ ಜನಕ್ಕೆ ಡಿ.ಕೆ.ಸುರೇಶ್ ಏನು ಎಂಬುದು ಗೊತ್ತಿದೆ. ಅಮಿತ್ ಶಾ ಬಂದರೆ ಬಲ ಬರಬಹುದು ಎಂದು ಮಾಡುತ್ತಿದ್ದಾರೆ.
Related Articles
ಬಿಜೆಪಿ ಈಗ ಗೊಂದಲದ ಗೂಡಾಗಿದೆ. ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು, ಪ್ರತಾಪಸಿಂಹ ಸಹಿತ ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಏಕಾಏಕಿ ಕೈಬಿಟ್ಟಿದ್ದಾರೆ. 40 ವರ್ಷ ರಾಜಕಾರಣ ಮಾಡಿಕೊಂಡು ಬಂದವರನ್ನು ಈ ರೀತಿ ಕೈಬಿಟ್ಟರೆ ಹೇಗೆ? ಬಿಜೆಪಿ ದುರ್ಬಲ ತಂತ್ರಗಾರಿಕೆ ಮಾಡಿದೆ. ನಮ್ಮ ಪಕ್ಷ ಭವಿಷ್ಯದಲ್ಲಿ 30-40 ವರ್ಷಗಳ ಕಾಲ ರಾಜಕಾರಣ ಮಾಡಬಲ್ಲ ಯುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇವರು ರಾಜಕೀಯವಾಗಿ ಪಕ್ಷಕ್ಕೆ ಅಡಿಪಾಯ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
ಅಪ್ಪ-ಮಗಳನ್ನು ದೂರ ಮಾಡಿದ ಅಪವಾದ ಬೇಡ ನಿಶಾ ಯೋಗೇಶ್ವರ ನಮ್ಮ ಮನೆ ಮಗಳಂತೆ. ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ರಾಜಕೀಯಕ್ಕೆ ಅಪ್ಪ-ಮಗಳನ್ನು ದೂರ ಮಾಡಿದ ಅಪವಾದ ಬೇಡ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಆಕೆ ವಿವಾಹವಾಗಿ ಬೇರೆ ಕುಟುಂಬಕ್ಕೆ ಸೇರಿದ್ದರೆ ನಾವು ಇಷ್ಟು ಆಲೋಚನೆ ಮಾಡುತ್ತಿರಲಿಲ್ಲ. ಹೀಗಾಗಿ ನಾನು, ನನ್ನ ಸಹೋದರ ಈ ವಿಚಾರವಾಗಿ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ. ನಿಶಾ ದೊಡ್ಡ ಧೈರ್ಯ ಮಾಡಿರುವಂತೆ ಕಾಣು
ತ್ತಿದೆ. ಕಾಂಗ್ರೆಸ್‌ನಲ್ಲೇ ಕೆಲಸ ಮಾಡುತ್ತೇನೆ ಎಂದು ಆಕೆ ತೀರ್ಮಾನಿಸಿದರೆ ಆಕೆಯನ್ನು ಹೊರದಬ್ಬಲು ಆಗುವುದಿಲ್ಲ. ಹೀಗಾಗಿ ಸ್ಥಳೀಯ ನಾಯಕರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.