ತೀವ್ರ ಚರ್ಚೆಗೆ ಗ್ರಾಸವಾಗಿದೆ.
Advertisement
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ. ಜಿ.ಎಸ್.ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಣ ತಜ್ಞರಾದ ಪ್ರೊ. ಚಂದ್ರಶೇಖರ ದಾಮ್ಲೆ, ಪ.ಮಲ್ಲೇಶ್, ಗಂಗಾಧರ ಕುಷ್ಠಗಿ, ಬಾನು ಮುಷ್ತಾಕ್ ಹಾಗೂ ಫಾ.ಅಂಬ್ರೋಸ್ ಪಿಂಟೋ ಒಳಗೊಂಡ ಸರ್ಕಾರಿಶಾಲೆಗಳ ಸಬಲೀಕರಣ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯು ಸರ್ಕಾರಿ ಶಾಲೆಗಳ ಸ್ಥಿತಿಗತಿ ಅಧ್ಯಯನ ನಡೆಸಿ ಸಮಗ್ರ ವರದಿಯನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು. ಸಮಿತಿ ವರದಿ ಸಲ್ಲಿಸಿ ವರ್ಷ ಕಳೆದರೂ ಅನುಷ್ಠಾನದ ಬಗ್ಗೆ ಸರ್ಕಾರ ಕಿಂಚಿತ್ತೂ ಯೋಚಿಸಿಲ್ಲ.
ಸರ್ಕಾರಿ ಶಾಲೆಗಳ ಸಬಲೀಕರಣ ಸಮಿತಿ ನೀಡಿದ್ದ ವರದಿಯನ್ನೇ ಅನುಷ್ಠಾನ ಮಾಡಲು ಮೀನಮೇಷ ಎಣಿಸುತ್ತಿರುವ ಸರ್ಕಾರ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳನ್ನು ಮರಳಿ ಸರ್ಕಾರಿ ಶಾಲೆಗೆ ಕರೆತಲು ಸಾಧ್ಯವೇ ಎಂಬ ಪ್ರಶ್ನೆ ಸಾರ್ವಜನಿಕವಾಗಿ ಎದ್ದಿದೆ.
ಸೌಲಭ್ಯವಿರುವ ಸರ್ಕಾರಿ ಶಾಲೆಯೊಂದನ್ನು ಗುರುತಿಸಿ ಕರ್ನಾಟಕ ಪಬ್ಲಿಕ್ ಶಾಲೆ ಎಂದು ಮರು ನಾಮಕರಣ ಮಾಡಲಾಗಿದೆ. ಆದರೆ, ಇದರ ಅಭಿವೃದಿಟಛಿ ಮತ್ತು ಉನ್ನತೀಕರಣಕ್ಕೆ ಸಮಗ್ರವಾದ ಮಾರ್ಗಸೂಚಿ ಇನ್ನೂ ಪ್ರಕಟವಾಗಿಲ್ಲ. ಸರ್ಕಾರಿ ಶಾಲೆಯನ್ನೇ ಸಮಗ್ರವಾಗಿ ಅಭಿವೃದ್ಧಿ ಪಡಿಸಿಕೊಳ್ಳದೇ ಖಾಸಗಿ ಶಾಲೆಯಲ್ಲಿ ಈಗ ಓದುತ್ತಿರುವ ಮಕ್ಕಳನ್ನು ಮರಳಿ ಸರ್ಕಾರಿ ಶಾಲೆಗೆ ಕರೆತರಲು ಸಾಧ್ಯವೇ? ಹಾಗಾದರೆ, ಮುಖ್ಯಮಂತ್ರಿಗಳು ಈ ಹೇಳಿಕೆ ನೀಡುವ ಮೊದಲ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎಂಬ ಪ್ರಶ್ನೆಯೂ ಉದ್ಭವಿಸುವುದು ಸಹಜ. ಆರ್‌ಟಿಇ ಅಡಿ ಖಾಸಗಿ ಶಾಲೆಗೆ ಸೇರಿದ ಮಕ್ಕಳನ್ನು ವಾಪಸ್ ಸರ್ಕಾರಿ ಶಾಲೆಗೆ ಕರೆತರಲು ಕಾನೂನು ಅಡ್ಡಿಯಾಗಬಹುದು. ಅಂತಹ ಸಂದರ್ಭದಲ್ಲಿ ಆರ್‌ಟಿಇ ಅಲ್ಲದ ಮಕ್ಕಳನ್ನು ಪಾಲಕರ ಮನವೊಲಿಸಿ ಸರ್ಕಾರಿ ಶಾಲೆಗೆ ಕರೆತರಲು ಸಾಧ್ಯವೇ ಎಂದು ಶಿಕ್ಷಣ ತಜ್ಞರು ಪ್ರಶ್ನಿಸಿದ್ದಾರೆ.
Related Articles
ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮವಿಲ್ಲ. ಇಂಗ್ಲಿಷ್ ಒಂದು ಭಾಷೆಯಾಗಿ ಕಲಿಸಲಾಗುತ್ತಿದೆ. ಖಾಸಗಿ ಶಾಲೆಗಳಲ್ಲಿ ಇರುವಷ್ಟು ಸೌಲಭ್ಯ
ಸಹಿತವಾದ ಗುಣಮಟ್ಟದ ಶಿಕ್ಷಣವೂ ಸರ್ಕಾರಿ ಶಾಲೆಯಲ್ಲಿ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ತಜ್ಞರೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Advertisement
ಪರಿಶ್ರಮ ಅಗತ್ಯ ಸರ್ಕಾರಿ ಶಾಲೆ ಬಲವರ್ಧನೆಯಾದರೆ, ತಾನಾಗಿಯೇ ಮಕ್ಕಳ ಸಂಖ್ಯೆ ಹೆಚ್ಚಾಗುತ್ತದೆ. ಖಾಸಗಿ ಶಾಲೆಯೇ ಬೇಕೆಂಬ ಅನಿವಾರ್ಯತೆ ಈಗ ಸೃಷ್ಟಿಯಾಗಿದೆ. ರಾಮನಗರ ಜಿಲ್ಲೆಯಲ್ಲಿ ಈ ವರ್ಷ ಸಾವಿರಕ್ಕೂ ಅಧಿಕ ಮಕ್ಕಳು ಸರ್ಕಾರಿ ಶಾಲೆ ಸೇರಿದ್ದಾರೆ. ಮುಖ್ಯಮಂತ್ರಿ ಹೇಳಿಕೆಯ ಉದ್ದೇಶ ಚೆನ್ನಾಗಿದೆ. ಆದರೆ ಅದನ್ನು ಕಾರ್ಯರೂಪಕ್ಕೆ ತರಲು ಪರಿಶ್ರಮ ಅಗತ್ಯವಿದೆ ಎಂದು ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಖಾಸಗಿ ಶಾಲೆಯಲ್ಲಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಮರಳಿ ಕರೆಯುವುದು ಅಷ್ಟು ಸುಲಭವಲ್ಲ. ವಾಸ್ತವಾಂಶ ಬೇರೆ ಇದೆ. ಕಾನೂನು ಬಾಹಿರವಾಗಿ ಅಥವಾ ಸಂವಿಧಾನಕ್ಕೆ ವಿರುದ್ಧವಾಗಿ ಈ ಕಾರ್ಯ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳ ಹೇಳಿಕೆ ವಾಸ್ತವಕ್ಕೆ ದೂರವಿದೆ.
● ಡಿ.ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಖಾಸಗಿ ಶಾಲಾಡಳಿತ ಮಂಡಳಿಗಳ ಸಂಘಟನೆ. ● ರಾಜು ಖಾರ್ವಿ ಕೊಡೇರಿ