Advertisement
ವಿಪಕ್ಷ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಬಗ್ಗೆ ಸಮಾಲೋಚನೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಾಜಿ ಸಿಎಂ ಸಿದ್ದರಾಮಯ್ಯಅವರನ್ನು ಸೋಮ ವಾರ ದಿಲ್ಲಿಗೆ ಬರುವಂತೆ ಆಹ್ವಾನಿಸಿದ್ದಾರೆ. ಮಂಗಳವಾರ ಎರಡು ಪ್ರಮುಖ ಹುದ್ದೆಗಳಿಗೆ ಸಂಬಂಧಿಸಿ ಉಭಯ ನಾಯಕರು ಚರ್ಚೆ ನಡೆಸಲಿರುವರು.
Related Articles
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ವಿಪಕ್ಷ ನಾಯಕರೂ ಆಗಿದ್ದಾರೆ. ಆದರೆ ಮೂಲ ಕಾಂಗ್ರೆಸ್ ನಾಯಕರು ಒಂದು ಹುದ್ದೆಯನ್ನು ಬೇರೆಯವರಿಗೆ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಸಿದ್ದರಾಮಯ್ಯ ಮಾತ್ರ ಎರಡೂ ಹುದ್ದೆ ಇಲ್ಲದಿದ್ದರೆ ತನಗೆ ಯಾವುದೇ ಜವಾಬ್ದಾರಿ ಬೇಡ ಎನ್ನುವ ರೀತಿ ಹೈಕಮಾಂಡ್‌ಗೆ ಸಂದೇಶ ರವಾನೆ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ನೇರವಾಗಿಯೇ ಅವರ ಅಭಿಪ್ರಾಯ ಪಡೆದು ಪಕ್ಷದ ಹಿತದೃಷ್ಟಿಯಿಂದ ಎರಡೂ ಹುದ್ದೆಗಳಿಗೆ ಪ್ರತ್ಯೇಕ ನಾಯಕರನ್ನು ನೇಮಕ ಮಾಡುವ ಬಗ್ಗೆ ಅವರ ಅಭಿಪ್ರಾಯ ಪಡೆದು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಒಂದೊಮ್ಮೆ ಒಬ್ಬರಿಗೆ ಒಂದೇ ಹುದ್ದೆ ನೀಡಬೇಕೆಂಬ ತೀರ್ಮಾನ ಕೈಗೊಂಡರೆ ಸಿದ್ದರಾಮಯ್ಯ ಯಾವ ಹುದ್ದೆ ಬಯಸುತ್ತಾರೆ ಎಂಬ ಬಗ್ಗೆಯೂ ಸೋನಿಯಾ ಗಾಂಧಿಯವರು ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಒಬ್ಬರಿಗೆ ಒಂದು ಹುದ್ದೆ ನೀಡಬೇಕೆಂಬ ವಿಚಾರದಲ್ಲಿ ಸಹಮತ ವ್ಯಕ್ತಪಡಿಸಿ ದ್ದಾರೆ ಎನ್ನಲಾಗಿದೆ. ಅವರು ವಿಪಕ್ಷ ನಾಯಕ ಸ್ಥಾನ ದಲ್ಲಿ ಮುಂದುವರಿಯುವ ಇಚ್ಛೆ ಹೊಂದಿದ್ದಾರೆ ಎನ್ನ ಲಾಗುತ್ತಿದೆ. ಹೀಗಾಗಿ ಶಾಸಕಾಂಗ ಪಕ್ಷದ ನಾಯಕರ ಸ್ಥಾನಕ್ಕೆ ಯಾರು ಸೂಕ್ತ ಎಂಬ ಬಗ್ಗೆ ಸಿದ್ದರಾಮಯ್ಯ ಅಭಿಪ್ರಾಯ ಪಡೆಯುವ ಸಾಧ್ಯತೆ ಇದೆ.
Advertisement