ಲಂಡನ್:ಭಾರತಕ್ಕೆ ಹಸ್ತಾಂತರಿಸುವ ಆದೇಶವನ್ನು ಪ್ರಶ್ನಿಸಿ ನೀರವ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ವಜಾಗೊಳಿಸಿದೆ. ಕಳೆದ ತಿಂಗಳು ಭಾರತದಲ್ಲಿ ಕೋಟ್ಯಂತರ ರೂ. ವಂಚಿಸಿ ಬ್ರಿಟನ್ ನಲ್ಲಿ ತಲೆಮರೆಸಿಕೊಂಡಿದ್ದ ಉದ್ಯಮಿ ನೀರವ್ ಮೋದಿಯನ್ನು ಗಡಿಪಾರು ಮಾಡುವಂತೆ ಬ್ರಿಟನ್ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಆದೇಶ ಹೊರಡಿಸಿದ್ದರು.
ಇದನ್ನೂ ಓದಿ:ಉತ್ತರ ಪ್ರದೇಶದ ಕಾಂಗ್ರೆಸ್ ಗೆ ಪ್ರಿಯಾಂಕ ಅವರದ್ಧೇ ನೇತೃತ್ವ : ಸಲ್ಮಾನ್ ಖುರ್ಷಿದ್
ಇದೀಗ ನೀರವ್ ಮೋದಿ ಬ್ರಿಟನ್ ಕಾಯ್ದೆಯನ್ವಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೌಖಿಕ ಮೇಲ್ಮನವಿ ಸಲ್ಲಿಸಲು ಐದು ದಿನಗಳ ಕಾಲಾವಕಾಶ ಲಭ್ಯವಾಗಲಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ಫೆಬ್ರುವರಿಯಲ್ಲಿ ಆದೇಶ ನೀಡಿತ್ತು.
ಈ ನಿಟ್ಟಿನಲ್ಲಿ ಪ್ರೀತಿ ಪಟೇಲ್ ಅವರು ಭಾರತಕ್ಕೆ ಹಸ್ತಾಂತರಿಸುವಂತೆ ಆದೇಶ ನೀಡಿದ್ದರು. ಇದನ್ನು ಪ್ರಶ್ನಿಸಿ ನೀರವ್ ಮೋದಿ ಬ್ರಿಟನ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.