Advertisement

ನಿತೀಶ್ ಕುಮಾರ್ ಪ್ರಧಾನಿ ಹುದ್ದೆಯ ಅಭ್ಯರ್ಥಿಯೇ?: ಬಿಹಾರ ಸಿಎಂ ಹೇಳಿದ್ದಿಷ್ಟು?

02:20 PM Aug 12, 2022 | Team Udayavani |

ಹೊಸದಿಲ್ಲಿ: ಬಿಹಾರದಲ್ಲಿ ಬಿಜೆಪಿ ಜೊತೆಗಿನ ತಮ್ಮ ಪಕ್ಷದ ಆಡಳಿತಾರೂಢ ಮೈತ್ರಿಕೂಟದಿಂದ ಹೊರನಡೆಯುವ ಮೂಲಕ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿದ ಕೆಲವು ದಿನಗಳ ನಂತರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಗಳು ತಮ್ಮ ಮನಸ್ಸಿನಲ್ಲಿಲ್ಲ ಎಂದು ಹೇಳಿದ್ದಾರೆ.

Advertisement

ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ನಾನು ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇನೆ ಮತ್ತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ಆಗಸ್ಟ್ 10 ರಂದು ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ನಿತೀಶ್ ಕುಮಾರ್ ಅವರು ಮುಂದಿನ ಲೋಕಸಭಾ ಚುನಾವಣೆಯನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡದ್ದರು. “ಅವರು 2014 ರಲ್ಲಿ ಗೆದ್ದಿದ್ದಾರೆ, ಆದರೆ ಅವರು 2024 ರಲ್ಲಿ ಗೆಲ್ಲುತ್ತಾರೆಯೇ?” ಎಂದು ಪ್ರಶ್ನಿಸಿದ್ದರು. ಆಗಲೂ ತಾನು 2024ರ ಪ್ರಧಾನಿ ಅಭ್ಯರ್ಥಿ ಅಲ್ಲ ಎಂದು ಹೇಳಿದ್ದರು.

ಇಂದು ಮತ್ತೆ ಈ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಕ್ಕೆ ಪ್ರತಿಕ್ರಿಯಿಸಿ, ‘ಅದು (ಪ್ರಧಾನಿ ಹುದ್ದೆ) ನನ್ನ ಮನಸಿನಲ್ಲಿಲ್ಲ. ಜನ ಏನೇ ಹೇಳಲಿ, ಆಪ್ತರು ಹೇಳಿದರೂ ಪರವಾಗಿಲ್ಲ. ಆದರೆ ಪ್ರತಿಪಕ್ಷಗಳೆಲ್ಲ ಒಟ್ಟಾಗಿ ಕೆಲಸ ಮಾಡಿದರೆ ಉತ್ತಮ. ಇದರ ಕುರಿತಾಗಿ ನಾನು ಕೆಲಸ ಮಾಡುತ್ತೇನೆ ಎಂದು ನಿತೀಶ್ ಕುಮಾರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next