Advertisement
ಪ್ರತಿವರ್ಷ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಬಜೆಟ್ ಮಂಡನೆಯಾದ ಮೇಲೆ ಸಾಮಾನ್ಯ ಬಜೆಟ್ ಮಂಡನೆಯಾಗುತ್ತಿತ್ತು. ಆದರೆ ಇದು 4ನೇ ಬಾರಿಗೆ ಸಾಮಾನ್ಯ ಬಜೆಟ್ ಜೊತೆಯಲ್ಲಿ ರೈಲ್ವೆ ಬಜೆಟ್ ಸೇರಿಸಿ ಮಂಡನೆಯಾಗುತ್ತಿದೆ. ಜಿಲ್ಲೆಗೆ ಕಳೆದ 2009-10 ರಲ್ಲಿ ಮಂಜೂರಾದ ಹಲವು ರೈಲ್ವೆ ಯೋಜನೆಗಳು ಇಂದಿಗೂ ಕಾರ್ಯಗತವಾಗಿಲ್ಲ. ಕಳೆದ ರೈಲ್ವೆ ಬಜೆಟ್‌ನಲ್ಲಿ ಮಂಡಿಸಿದ್ದ ಯೋಜನೆಗಳು ನಿಂತಲ್ಲೇ ನಿಂತಿವೆ. ಹೀಗಿರುವಾಗ ಈಗ ಮಂಡಿಸಲಿರುವ ಬಜೆಟ್‌ನಲ್ಲಿ ರೈಲ್ವೆ ಯೋಜನೆಯಲ್ಲಿ ಏನು ಕೊಡುಗೆ ನೀಡಬಹುದು ಎಂಬ ಕುತೂಹಲವಿದೆ.
Related Articles
Advertisement
ಮೋದಿ ಸರ್ಕಾರದಲ್ಲಿ ಜಿಲ್ಲೆಯ ಜನರ ನಿರೀಕ್ಷೆಯೇನು?: ಈ ಹಿಂದೆ ಕೇಂದ್ರ ನರೇಂದ್ರ ಮೋದಿ ಸರ್ಕಾರದಲ್ಲಿ ಜಿಲ್ಲೆಗೆ ಸ್ಮಾರ್ಟ್ ಸಿಟಿ ಯೋಜನೆ ಬಂದು ಅದರ ಕೆಲಸ ಆರಂಭಗೊಂಡಿದೆ. ಪಾಸ್‌ಪೋರ್ಟ್ ಕಚೇರಿ ಆರಂಭಗೊಂಡಿದೆ. ತುಮಕೂರು ಎಚ್ಎಂಟಿ ಕೈ ಗಡಿಯಾರ ಕಾರ್ಖಾನೆ ಜಾಗವನ್ನು ಇಸ್ರೋಗೆ ನೀಡಲಾಗಿದೆ. ಅದರ ಕಾರ್ಯ ಚಟುವಟಿಕೆ ಆರಂಭವಾಗಿದೆ. ಜಿಲ್ಲೆಯ ಗುಬ್ಬಿ ತಾಲೂಕು ನಿಟ್ಟೂರು ಬಳಿ ಎಚ್ಎಎಲ್ ಎಲಿಕ್ಯಾಪ್ಟರ್ ಘಟಕ ಪ್ರಾರಂಭಕ್ಕೆ ಸಿದ್ಧತೆ ನಡೆದಿದೆ. ಹಲವು ರೈಲ್ವೆ ಯೋಜನೆಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿ ಕಾಮಗಾರಿಗಳು ನಡೆಯುತ್ತಿವೆ. ಕೈಗಾರಿಕಾ ಕಾರಿಡಾರ್ ಯೋಜನೆಗೆ ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆ ಯಾಗಿತ್ತು. ಅದು ಇನ್ನೂ ಅನುಷ್ಠಾನವಾಗಿಲ್ಲ. ಕೆಲವು ರೈಲ್ವೆ ಯೋಜನೆಗಳು ಘೋಷಣೆ ಆಗಿದ್ದರೂ ಅವುಗಳ ಕಾರ್ಯ ಆರಂಭ ವಾಗಿಲ್ಲ. ತುಮಕೂರು ಜಿಲ್ಲೆಯ ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದು, ಈ ಬಜೆಟ್‌ನಲ್ಲಿ ತೆಂಗು ಬೆಳೆಗಾರರಿಗೆ ಅನುಕೂಲವಾಗುತ್ತಾ? ಏನೆಲ್ಲಾ ಬಜೆಟ್‌ನಲ್ಲಿ ಇರುತ್ತೆ ಎನ್ನುವುದೇ ಕುತೂಹಲ ಮೂಡಿದೆ.
ಹಲವು ಯೋಜನೆ ಬಗ್ಗೆ ಮಾಹಿತಿ ನೀಡಿದ್ದೇನೆ:
ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿರುವೆ ತುಮಕೂರು ನಗರದಲ್ಲಿ ಏಮ್ಸ್ ಮಾದರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕು, ಏಷ್ಯಾ ಖಂಡ ದಲ್ಲಿಯೇ ಪ್ರಸಿದ್ಧಿ ಪಡೆದಿರುವ ಜಿಲ್ಲೆಯ ಮಧುಗಿರಿ ತಾಲೂಕಿನ ಏಕಾಶಿಲ ಬೆಟ್ಟದ ಪಕ್ಕ ಅಂತಾರಾಷ್ಟ್ರೀಯ ಪ್ರವಾ ಸೋದ್ಯಮ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕು ಎಂದು ನೂತನ ಸಂಸದ ಜಿ.ಎಸ್.ಬಸವ ರಾಜ್ ಕೇಂದ್ರ ಸರ್ಕಾರವನ್ನು ಮನವಿ ಮಾಡಿದ್ದಾರೆ. ರಾಜ್ಯದ 29360 ಗ್ರಾಮ ಗಳಿಗೂ ಕುಡಿಯು ನೀರಿನ ಪೈಲಟ್ ಯೋಜನೆ, ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ತೆಂಗು ವಿಶೇಷ ಆರ್ಥಿಕ ವಲಯ ಸ್ಥಾಪನೆ, ತುಮಕೂರು ಕೇಂದ್ರ ಸ್ಥಾನವನ್ನಾಗಿ ಮಾಡಿ ಹಲಸು ಬೋರ್ಡ್ ಸ್ಥಾಪನೆ, ರಾಜ್ಯದ ರಾಜಧಾನಿ ಬೆಂಗಳೂರಿನಿಂದ ವಸಂತ ನರಸಪುರದ ನಿಮ್ಸ್ ವರೆಗೆ ಮೆಟ್ರೋ ಯೋಜನೆ, 2022 ರೊಳಗೆ ರೈತರ ಆದಾಯ ದುಪ್ಪಟ್ಟು ಗೊಳಿಸಲು ಜಿಲ್ಲೆ ಯಲ್ಲಿ ರೈತರ ಉತ್ಪನ್ನಗಳ ಫಾರ್ವರ್ಡ್ ಮತ್ತು ಲಿಂಕೇಜ್‌ಗಾಗಿ ಎಂಪಿಸಿಎಸ್ ಮಾದರಿಯಲ್ಲಿ ಸಹಕಾರಿ ಒಕ್ಕೂಟ ಸ್ಥಾಪಿ ಸುವ ಪೈಲಟ್ ಯೋಜನೆ ರೂಪಿಸಬೇಕು ಎಂದಿದ್ದಾರೆ. ಹಾಗೆಯೇ ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟದಲ್ಲಿ ರಾಷ್ಟ್ರೀಯ ಮಟ್ಟದ ಆಯುಷ್ ಪಾರ್ಕ್, ತುರುವೇ ಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೈನೋದ್ಯಮ ಹಬ್, ಚಿಕ್ಕನಾಯಕನಹಳ್ಳಿ ಅಥವಾ ಶಿರಾ ತಾಲೂಕಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮಿಲ್ಲೆಟ್ಸ್ ಪಾರ್ಕ್ ಸ್ಥಾಪನೆ ಮಾಡಲು ಮತ್ತು ಹಳೆ ರೈಲ್ವೆ ಯೋಜನೆಗಳ ಕಾಮಗಾರಿಗಳ ಚುರುಕು ಗೊಳಿಸಲು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
● ಚಿ.ನಿ. ಪುರುಷೋತ್ತಮ್