Advertisement
ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿಯಲ್ಲಿ ಮಂಗಳವಾರ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕೈಯಲ್ಲಿ ಚೊಂಬು ಹಿಡಿದುಕೊಂಡೇ ತಮ್ಮ ಭಾಷಣದುದ್ದಕ್ಕೂ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದರು. ಕುಮಾರಸ್ವಾಮಿ ಅವರನ್ನು 2 ಬಾರಿ ಮುಖ್ಯಮಂತ್ರಿ ಮಾಡಲಾಗಿತ್ತು. ಅನಿತಾ ಕುಮಾರಸ್ವಾಮಿ ಅವರು ವಿಧಾನಸಭೆಗೆ ಆಯ್ಕೆಯಾಗಲಿ ಎಂದು ನಾನೇ ಬಿಜೆಪಿ ಅಭ್ಯರ್ಥಿ ನಾಮಪತ್ರ ವಾಪಸ್ ತೆಗೆಸಿದೆ. ರೈತನ ಮಗ ಬಿಜೆಪಿ ಜತೆ ಹೋಗುವುದು ಬೇಡ ಎಂದು ನಾವೇ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಿದ್ದೇವೆ. ಆದರೆ ಸರಕಾರ ಇದ್ದಾಗ ಕೆಲಸ ಮಾಡದೆ ನಾವೇ ಮೋಸ ಮಾಡಿದ್ದೇವೆ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಹೇಳುತ್ತಿದ್ದಾರೆ. ಅದಕ್ಕೆ ಮತದಾರರು ಚುನಾವಣೆಯಲ್ಲಿ ಉತ್ತರ ಕೊಡಬೇಕು ಎಂದರು.
ಕುಮಾರಣ್ಣ ಮಾತೆತ್ತಿದರೆ ಕಲ್ಲು ಒಡೆದ ಎನ್ನುತ್ತಾರೆ. ನನ್ನ ಜಮೀನಿನಲ್ಲಿ ನಾನು ಕಲ್ಲು ಒಡೆದರೆ ನಿನಗೇನಯ್ನಾ ತೊಂದರೆ? ನಾನು ಯಾರ ಬಳಿಯಾದರೂ ಲಂಚ ಪಡೆದಿದ್ದೇನಾ? ಸೊಸೈಟಿ ನಿರ್ದೇಶಕ ಸ್ಥಾನದಿಂದ 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಎಂದಾದರೂ ನನ್ನ ಮೇಲೆ ಆಪಾದನೆ ಬಂದಿದೆಯಾ? ಎಂದು ಪ್ರಶ್ನಿಸಿದರು.