ಮುಂಬೈ: ಗಾಯದ ಕಾರಣದಿಂದ ಕೆಎಲ್ ರಾಹುಲ್ ಅವರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಿಂದ ಹೊರಬಿದ್ದ ಕಾರಣ ಬಿಸಿಸಿಐ ಬದಲಿ ಆಟಗಾರನನ್ನು ನೇಮಿಸಿದೆ. ಇಶಾನ್ ಕಿಶನ್ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ.
ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಅವರ ಬಲ ತೊಡೆಯ ಭಾಗಕ್ಕೆ ಗಾಯವಾಗಿತ್ತು. ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ನಂತರ, ರಾಹುಲ್ ಅವರಿಗೆ ಆದಷ್ಟು ಬೇಗ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧರಿಸಲಾಗಿದೆ. ಅವರಿಗೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಮುಂದಿನ ಐಪಿಎಲ್ ಪಂದ್ಯಗಳು ಮತ್ತು ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ನಿಂದ ಅವರು ಹೊರಗುಳಿದಿದ್ದಾರೆ.
ಇದನ್ನೂ ಓದಿ:Election 2023; ಬೆಳ್ತಂಗಡಿ- ಹಿಂದುತ್ವ ಒಂದಿಂಚು ಬಿಟ್ಟು ಕೊಡದ ಶಾಸಕ ಹರೀಶ್ ಪೂಂಜ
ಫೈನಲ್ ಪಂದ್ಯಕ್ಕೆ ನೇಮಕವಾಗಿದ್ದ ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕತ್ ಅವರು ಗಾಯಗೊಂಡಿದ್ದು, ಅವರ ಫೈನಲ್ ಪಂದ್ಯ ಪಾಲ್ಗೊಳ್ಳುವ ಬಗ್ಗೆ ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
Related Articles
ಡಬ್ಲೂಟಿಸಿ ಫೈನಲ್ ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್, ಇಶಾನ್ ಕಿಶನ್ (ವಿ.ಕೀ).
ಸ್ಟ್ಯಾಂಡ್ ಬೈ ಆಟಗಾರರು: ರುತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.