Advertisement

ಫ್ರೀಡಂ ಆಲ್ಬಂ ಸಾಂಗ್ ನಲ್ಲಿ ಇಶಾನಿ ಮಿಂಚು

04:36 PM Sep 01, 2023 | Team Udayavani |

ಆಲ್ಬಂ ಸಾಂಗ್‌ ಮೂಲಕ ಈಗಾಗಲೇ ಅನೇಕ ಪ್ರತಿಭೆಗಳು ಗುರುತಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ ಈಶಾನಿ. ಸದ್ಯ ಈಶಾನಿ ಹಾಡಿರುವ “ಫ್ರೀಡಂ’ ಆಲ್ಬಂ ಇತ್ತೀಚೆಗೆ ಬಿಡುಗಡೆಯಾಗಿದೆ. ಮೂಲತಃ ಮೈಸೂರಿನವರಾದ ಈಶಾನಿ ಸದ್ಯ ದುಬೈನಲ್ಲಿ ನೆಲೆಸಿದ್ದಾರೆ. ಗಾಯನದ ಬಗ್ಗೆ ಒಲವು ಬೆಳೆಸಿಕೊಂಡಿರುವ ಈಶಾನಿ ಈಗಾಗಲೇ 17 ಇಂಗ್ಲೀಷ್‌ ಅಲ್ಬಮ್‌ ಸಾಂಗ್‌ ಹಾಡಿದ್ದಾರೆ. ಕನ್ನಡದಲ್ಲೂ ಮೂರು ಆಲ್ಬಂ ಗೀತೆಗಳನ್ನು ಹಾಡಿ ಅದರಲ್ಲಿ ಹೆಜ್ಜೆ ಹಾಕಿದ್ದಾರೆ.

Advertisement

ಫ್ರೀಡಂ ಸಾಂಗ್‌ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಗಾಯಕಿ ಈಶಾನಿ, “ನಾನು ಮೈಸೂರಿನವಳು. ದುಬೈನಲ್ಲಿ ವಾಸವಿದ್ದು, ಆಲ್ಬಂ ಸಾಂಗ್‌ ಮಾಡುತ್ತಾ ಬಂದಿದ್ದೇನೆ. ಈಗಾಗಲೇ ಇಂಗ್ಲೀಷ್‌ನಲ್ಲಿ 17 ಅಲ್ಬಮ್‌ ಗೀತೆಗಳನ್ನು ಮಾಡಿದ್ದೇನೆ. ನನ್ನ ತಂದೆ-ತಾಯಿ ಕರ್ನಾಟಕದಲ್ಲೇ ಇದ್ದು, ಅವರಿಗೆ ನಾನು ಕನ್ನಡ ಭಾಷೆಯಲ್ಲಿ ಸಾಂಗ್‌ ಮಾಡಬೇಕು ಎಂಬ ಆಸೆ ಇತ್ತು. ನನಗೂ ಸಹ ಕನ್ನಡದಲ್ಲಿ ಹಾಡುವ ಬಯಕೆ ಇತ್ತು. ಹಾಗಾಗಿ ಈ ಪ್ರಯತ್ನಗಳು ನಡೆದವು. ನಾನು 13 ವರ್ಷದವಳಿದ್ದಾಗಿಂದಲೂ ಹಾಡುತ್ತಾ ಬಂದಿದ್ದೇನೆ. 2016ರಲ್ಲಿ ಮೊದಲು ಹಾಡನ್ನು ಬರೆದು ನಾನೇ ಹಾಡಿದೆ. ದುಬೈನಲ್ಲಿ ಬ್ಯುಸಿನೆಸ್‌ ಮ್ಯಾನೇಜ್‌ಮೆಂಟ್‌ ಡಿಗ್ರಿ ಮುಗಿಸಿ, ಈಗ ಸಂಪೂರ್ಣ ಸಮಯವನ್ನು ಸಂಗೀತಕ್ಕಾಗಿಯೇ ಮಿಸಲಿಟ್ಟಿದ್ದೇನೆ. ಮುಂದೆ ಮತ್ತಷ್ಟು ಕನ್ನಡ ಹಾಡುಗಳನ್ನು ಮಾಡಬೇಕು ಎಂಬ ಆಸೆಯಿದೆ’ ಎಂದರು.

ಇದೇ ವೇಳೆ “ಫ್ರೀಡಂ’ ಗೀತೆಯ ನಿರ್ದೇಶಕ ಗಿರಿ ಗೌಡ ಅವರು ನಿರ್ದೇಶಿಸಲಿರುವ “ಥಗ್ಸ್‌ ಆಫ್ 1980′ ಚಿತ್ರದ ಟೈಟಲ್‌ ಲಾಂಚ್‌ ಕೂಡ ಮಾಡಲಾಯಿತು. ಆಲ್ಬಂ ಅನ್ನು ವೆಂಕಟ್‌ ಅವರು ನಿರ್ಮಾಣ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next