Advertisement
ರಣಜಿ ಪಂದ್ಯದ ವೇಳೆ ಗಾಯಗೊಂಡಿದ್ದ ವೇಗದ ಬೌಲರ್ ಇಶಾಂತ್ ಶರ್ಮ ಬೆಂಗಳೂರಿನಲ್ಲಿರುವ ಎನ್ ಸಿಎ (ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ)ನಲ್ಲಿ ಫಿಟ್ನೆಸ್ ಸಾಬೀತುಪಡಿಸಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಇದೀಗ ಮೊದಲ ಟೆಸ್ಟ್ ವೇಳೆ ಮತ್ತೆ ಗಾಯಗೊಂಡು ಹೊರ ನಡೆದಿದ್ದಾರೆ.
ಅನುಮಾನ ಹುಟ್ಟುವಂತೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ಬಿಸಿಸಿಐ ಅಧಿಕಾರಿಗಳು “ಎನ್ ಸಿಎ ಗಾಯಾಳು ಕ್ರಿಕೆಟಿಗರಿಗೆ ತರಬೇತಿ ನೀಡಿ ಅವರು ಫಿಟ್ ಆಗಿದ್ದಾರೆ ಎಂದು ಸರ್ಟಿಫಿಕೇಟ್ ನೀಡುವುದು ಯಾವ ಆಧಾರದಲ್ಲಿ? ಇದನ್ನು ಎನ್‌ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ವಿವರಿಸಬೇಕಿದೆ. ಮುಂದೆ ಇಂತಹ ಲೋಪದೋಷಗಳು ನಡೆಯದಂತೆ, ಎನ್‌ಸಿಎ ಗುಣಮಟ್ಟ ಕಾಯ್ದುಕೊಳ್ಳುವ ಹೊಣೆಯನ್ನು ದ್ರಾವಿಡ್ ಹೊರಬೇಕಿದೆ’ ಎಂದುತಿಳಿಸಿದ್ದಾರೆ. ಸದ್ಯ ಗಾಯಗೊಂಡಿರುವ ಇಶಾಂತ್ ಮತ್ತೆ ಎನ್‌ಸಿಎಗೆ ಬಂದು ಶಿಬಿರದಲ್ಲಿ ಪಾಲ್ಗೊಳ್ಳಬೇಕಿದೆ