Advertisement
ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ವಿವರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಖೂಬಾ ಚುನಾವಣಾಧಿ ಕಾರಿಗೆ ಲಿಖೀತ ದೂರು ಸಲ್ಲಿಸಿ ನಾಮಪತ್ರ ತಿರಸ್ಕರಿಸುವಂತೆ ಆಗ್ರಹಿಸಿದರು. ಈ ವೇಳೆ, ಪರಸ್ಪರ ಮಾತಿನ ಚಕಮಕಿ ನಡೆಯಿತು. ಈಶ್ವರ ಖಂಡ್ರೆಯವರು ನಾಮಪತ್ರದಲ್ಲಿ ಕೃಷಿ ಭೂಮಿ ಇಲ್ಲ ಎಂದು ಘೋಷಿಸಿಕೊಂಡಿದ್ದಾರೆ.
ಅಜಯಕುಮಾರ ಹೆಸರಿನಿಂದ ಈಶ್ವರ ಎಂದುಯಾವಾಗ ಹೆಸರು ಬದಲಾವಣೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ಕೂಡ ಸಲ್ಲಿಸಿಲ್ಲ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಈಶ್ವರ ಖಂಡ್ರೆ ಪ್ರಮಾಣ ಪತ್ರದಲ್ಲಿ ಉದ್ಯೋಗ ಕಾಲಂನಲ್ಲಿ ಕೃಷಿಕ ಎಂದು ನಮೂದಿಸಿದ್ದಾರೆ. ಆದಾಯದ ಮೂಲ ಕೃಷಿ ಎಂದು ತೋರಿಸಿದ್ದಾರೆ. ಇದರಿಂದ ಖಂಡ್ರೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಸಂಸದ ಭಗವಂತ ಖೂಬಾ ಚುನಾವಣಾ ಧಿಕಾರಿಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.
Related Articles
Advertisement
ಬಹಿರಂಗ ಚರ್ಚೆಗೆ ಬರಲಿ“ಖಂಡ್ರೆ ಕುಟುಂಬ ಜಿಲ್ಲೆಯ ಅಭಿವೃದ್ದಿಗೆ ಪ್ರಯತ್ನಿಸಿಲ್ಲ ಎಂದು ಆರೋಪಿಸುವವರು ಬಹಿರಂಗ ಚರ್ಚೆಗೆ ಬರಲಿ’ ಎಂದು ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರೋಕ್ಷವಾಗಿ
ಬಿಜೆಪಿ ಸಂಸದ ಭಗವಂತ ಖೂಬಾ ಅವರಿಗೆ ಆಹ್ವಾನ ನೀಡಿದ್ದಾರೆ.ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸ್ವಾತಂತ್ರ್ಯದ ಬಳಿಕ ಜಿಲ್ಲೆಯಲ್ಲಿ ಹಾಹಾಕಾರವಿತ್ತು. ಅಂಥ
ಸಮಯದಲ್ಲಿ ಖಂಡ್ರೆ ಕುಟುಂಬ ಸೂಕ್ತ ಆಡಳಿತ ನೀಡಿದೆ. ಭೀಮಣ್ಣ ಖಂಡ್ರೆ ಅವರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಮಾಡಿದರು. ಹಿಂದುಳಿದ ಜಿಲ್ಲೆಗೆ ಮೂಲ ಸೌಕರ್ಯ ಕಲ್ಪಿಸಿದರು. ಕಬ್ಬು ಬೆಳೆಯುವ ರೈತರಿಗಾಗಿ
ಬಿಎಸ್‌ಎಸ್‌ಕೆ ಕಾರ್ಖಾನೆ ಸ್ಥಾಪಿಸಿದ್ದಾರೆ. ಜಿಲ್ಲೆಯ ಸರ್ವಾಂಗೀಣ ಅಭಿವೃದಿಟಛಿ ಜತೆಗೆ ಶಿಕ್ಷಣ ಕ್ರಾಂತಿ ಮಾಡಿದ್ದು ಖೂಬಾ ಅಲ್ಲ, ಭೀಮಣ್ಣ ಖಂಡ್ರೆ ಅವರ ಶ್ರಮದಿಂದ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.