Advertisement
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕು ಕಲ್ಪಿಸುವ, ಅರಣ್ಯ ಹಕ್ಕು ಕಾಯಿದೆಯಡಿ ಅರಣ್ಯವಾಸಿಗಳ ಹಕ್ಕು ರಕ್ಷಿಸುವ ಹಾಗೂ ಹುಲಿ ಉಗುರು ಸೇರಿದಂತೆ ವನ್ಯ ಜೀವಿಗಳ ಅಂಗಾಂಗದ ಫಲಕಗಳು, ಆಭರಣಗಳೇ ಮೊದಲಾದ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು ಒಂದು ಬಾರಿ ಅವಕಾಶ ನೀಡುವ ನಿಟ್ಟಿನಲ್ಲಿ ಕಾನೂನಾತ್ಮಕ ವಿಷಯಗಳ ಕುರಿತಂತೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಕಾನೂನು ಇಲಾಖೆ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ.
Related Articles
Advertisement
ಹುಲಿ ಉಗುರು: ಸಂಪುಟಕ್ಕೆ ಪ್ರಸ್ತಾವನೆ
ವನ್ಯ ಜೀವಿಗಳ ಅಂಗಾಂಗದ ವಸ್ತುಗಳನ್ನು ಇಟ್ಟುಕೊಳ್ಳಲು ಕಾನೂನಿನಲ್ಲಿ ಅಕಾಶವಿಲ್ಲದ ಕಾರಣ, ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡಬಹುದು, ಕೇರಳ ಸರ್ಕಾರ ಕೈಗೊಂಡ ನಿರ್ಧಾರ ಮತ್ತು ನಮ್ಮ ಸರ್ಕಾರದ ಉದ್ದೇಶಿತ ನಿರ್ಧಾರ ವಿಭಿನ್ನವಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಕಡತವನ್ನು ಪುನರ್ ಮಂಡಿಸಲು ಸೂಚನೆ ನೀಡಲಾಗಿದೆ.
ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ, ಕಾನೂನಿನ ಅರಿವಿಲ್ಲದೆ ತಮ್ಮ ಬಳಿ ವನ್ಯ ಜೀವಿಗಳ ಅಂಗಾಂಗದ ವಸ್ತುಗಳನ್ನು ನೋಂದಣಿ ಮಾಡದೆ ಇಟ್ಟುಕೊಂಡಿರುವ ಮುಗ್ದ ಜನತೆಗೆ ಕಿರುಕುಳ ಆಗದ ರೀತಿಯಲ್ಲಿ ಒಂದು ಬಾರಿ ಕೊನೆಯ ಅವಕಾಶ ನೀಡಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಇದಕ್ಕೂ ಮುನ್ನ ವಿಕಾಸಸೌಧದ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೇಂದ್ರ ಸರ್ಕಾರದ ಉನ್ನತಾಧಿಕಾರಿ ಮಹೇಶ್, ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜ್ಜೂರ್, ಅರಣ್ಯ ಮತ್ತು ಕಾನೂನು ಇಲಾಖೆಯ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.