Advertisement
ಉದ್ಯಾನದಂಚಿನ ವೀರನಹೊಸಹಳ್ಳಿ ಸಮೀಪದ ಖಾಸಗಿ ರೆಸಾರ್ಟ್ ನಲ್ಲಿ ಕುಟುಂಬ ಸಮೇತ ವಿಶ್ರಾಂತಿಗಾಗಿ ಆಗಮಿಸಿದ್ದ ವೇಳೆ ಸ್ಥಳೀಯ ಮುಖಂಡರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಉದ್ಯಾನವನದಂಚಿನ ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಬೆಳೆ ನಷ್ಟವಾಗುತ್ತಿದ್ದು, ಕೃಷಿಕರು, ಕಾಫಿ ಬೆಳೆಗಾರರಿಗೆ ಸಮಸ್ಯೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುನ ನಿಟ್ಟಿನಲ್ಲಿ ಕಾಡು ಪ್ರಾಣಿಗಳು ತೋಟಗಳಿಗೆ ನುಗ್ಗದಂತೆ, ರೈಲ್ವೆ ಹಳಿ ತಡೆಗೋಡೆ ಇಲ್ಲದ ಕಡೆಗಳಲ್ಲಿ ಹಾಗೂ ಹಳಿ ಇರುವ ಕಡೆಗಳಲ್ಲೂ ಕಂದಕ ನಿರ್ಮಿಸಿ, ವನ್ಯಪ್ರಾಣಿಗಳು ಹೊರದಾಟದಂತೆ ಕ್ರಮವಹಿಸಲಾಗುವುದೆಂದು ಅಭಯ ನೀಡಿದರು.
ನಾಗರಹೊಳೆ ಉದ್ಯಾನವನವು ಪ್ರವಾಸಿ ತಾಣವಾಗಿರುವುದರಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಅರಣ್ಯ ಅಸುಪಾಸಿನಲ್ಲಿ ಸ್ವಚ್ಛತೆ ಕಾಪಾಡುವುದು ಮುಖ್ಯ. ಇಲ್ಲದಿದ್ದಲ್ಲಿ ಕಾಡು ಪ್ರಾಣಿಗಳು ತಿಂದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಅರಣ್ಯ ಸಿಬ್ಬಂದಿಗಳು ಸಹ ಎಚ್ಚರವಹಿಸುವುದು ಅತ್ಯಗತ್ಯ. ಈ ಬಗ್ಗೆ ವಾಹನ ಸವಾರರಿಗೂ ಎಚ್ಚರಿಸಬೇಕಿದೆ ಹಾಗೂ ಭಾಗಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿ ಇಡುವಂತೆ ಮತ್ತು ಕಸದ ತೊಟ್ಟಿಗಳನ್ನು ನಿರ್ಮಾಣ ಮಾಡಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಅಭಿವೃದ್ಧಿ ಕಾರ್ಯಗಳು ಸುಸ್ಥಿರವಾಗಿರಬೇಕು. ಪ್ರವಾಸಿ ತಾಣಗಳಲ್ಲಿ ರಸ್ತೆಗಳ ಅಭಿವೃದ್ಧಿಯಾಗಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸುತ್ತೇನೆಂದರು. ಈ ವೇಳೆ ಎಪಿಎಂಸಿ ಮಾಜಿ ಅಧ್ಯಕ್ಷ ಸುಭಾಷ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಾ.ರಾ.ಮಹೇಶ್, ರೈತ ರವಿಚಂದ್ರನ್ ಮತ್ತಿತರರು ಮನವಿ ಮಾಡಿದರು.
Related Articles
Advertisement