ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆ ವಿರುದ್ಧ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯಂದು ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರಾಲಿಯನ್ನು ಹೈಜಾಕ್ ಮಾಡಿ ರಾಲಿಯನ್ನು ಹಾಳುಗೆಡವಲು ಪಾಕಿಸ್ತಾನದ ಐಎಸ್ ಐ ಮತ್ತು ಖಾಲಿಸ್ತಾನ್ ಲಿಸ್ತಾನ್ ಉಗ್ರ ಸಂಘಟನೆ ಸಂಚು ರೂಪಿಸಿರುವುದಾಗಿ ಮೂಲಗಳು ತಿಳಿಸಿದೆ.
ಇದನ್ನೂ ಓದಿ:ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ
ದೆಹಲಿಯಲ್ಲಿ ರೈತ ಮುಖಂಡರು ನಡೆಸಲಿರುವ ಟ್ರ್ಯಾಕ್ಟರ್ ರಾಲಿ ವೇಳೆ ವಿಧ್ವಂಸಕ ಕೃತ್ಯ ಎಸಗುವ ಕುರಿತು ಪಾಕಿಸ್ತಾನದ 300ಕ್ಕೂ ಅಧಿಕ ಟ್ವೀಟರ್ ಹ್ಯಾಂಡಲ್ಸ್ ಪತ್ತೆ ಹಚ್ಚಿರುವುದಾಗಿ ದೆಹಲಿ ಪೊಲೀಸರು ಭಾನುವಾರ(ಜನವರಿ 24) ತಿಳಿಸಿದ್ದರು.
ಗಣರಾಜ್ಯೋತ್ಸವ ಹಾಗೂ ರೈತರ ಟ್ರ್ಯಾಕ್ಟರ್ ರಾಲಿ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಮೂಲಗಳು ಹೇಳಿವೆ. ನಿಷೇಧಿತ ಉಗ್ರಗಾಮಿ ಸಂಘಟನೆಗಳು ಸಂಚು ರೂಪಿಸಿವೆ ಎಂಬ ಮಾಹಿತಿ ನಿಟ್ಟಿನಲ್ಲಿ ದೆಹಲಿ ಪೊಲೀಸರು ಮತ್ತು ಭದ್ರತಾ ಏಜೆನ್ಸಿ ಹೈಅಲರ್ಟ್ ಆಗಿರುವುದಾಗಿ ವರದಿ ವಿವರಿಸಿದೆ.
ಕಳೆದ ವರ್ಷ ಕೇಂದ್ರ ಸರ್ಕಾರ ಭಯೋತ್ಪಾದಕ ನಿಗ್ರಹ ಕಾಯ್ದೆ(ಯುಎಪಿಎ)ಯಡಿ ಖಾಲಿಸ್ತಾನ್ ಸಂಘಟನೆಯ ಮೇಲೆ ಹೇರಿದ್ದ ನಿಷೇಧವನ್ನು ಎತ್ತಿಹಿಡಿದಿತ್ತು. ರಾಲಿಯ ಸಂದರ್ಭದಲ್ಲಿ ಕುಖ್ಯಾತ ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಬಿಂದ್ರನ್ ವಾಲೆ ಪೋಸ್ಟರ್ ಹರಿದಾಡುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.