Advertisement
ಐಸಿಸ್ ನಂಟಿನ ಆರೋಪದಡಿ ಯುಎಪಿಎ ಕಾಯ್ದೆಯಡಿ ಅಮ್ಮರ್ ಅಬ್ದುಲ್ ರೆಹಮಾನ್ನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಗಸ್ಟ್ 21, 2021ರಂದು ಬಂಧಿಸಿತ್ತು. ಆರೋಪಿಯ ಮೊಬೈಲ್ ಮತ್ತು ಲ್ಯಾಪ್ಟಾಪ್ನಲ್ಲಿ ಉಸಾಮ ಬಿನ್ ಲಾದನ್ ಚಿತ್ರಗಳು, ಐಸಿಸ್ ಬಾವುಟಗಳು, ಐಸಿಸ್ ಪರ ಭಾಷಣಗಳ ತುಣುಕು ಸೇರಿದಂತೆ ಕೆಲವೊಂದು ಪುರಾವೆಗಳು ಸಿಕ್ಕಿದ್ದವು. ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಅಮ್ಮರ್ ಅಬ್ದುಲ್ ರೆಹಮಾನ್ಗೆ ವಿಚಾರಣಾ ಧೀನ ಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ದಿಲ್ಲಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು, ಸದ್ಯ ಸುದೀರ್ಘ ವಿಚಾರಣೆ ಬಳಿಕ ಜಾಮೀನು ನೀಡಿದೆ. Advertisement
ISIS case: ಅಮ್ಮರ್ ಅಬ್ದುಲ್ಗೆ ಜಾಮೀನು
10:42 AM May 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.