ಶಿವಮೊಗ್ಗ: ಭದ್ರಾವತಿಯಲ್ಲಿ ವಿಐಎಸ್ ಎಲ್ ಕಾರ್ಖಾನೆ ಕಾರ್ಮಿಕರ ಹೋರಾಟ ತೀವ್ರಗೊಂಡಿದೆ. ಸೋಮವಾರ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಗೆ ಪ್ರತಿಭಟನಾನಿರತ ಕಾರ್ಮಿಕರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ಭದ್ರಾವತಿಯ ಬಸವೇಶ್ವರ ಸಭಾಭವನದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸಭೆ ನಡೆಯುತ್ತಿದ್ದ ವೇಳೆ ಕಾರ್ಮಿಕರು ಪ್ರತಭಟಿಸಿ, ಧಿಕ್ಕಾರ ಕೂಗಿದರು.
ಇದೇ ವೇಳೆ ಸಭೆಯಲ್ಲಿ ಭಾಗವಹಿಸಿದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮುತ್ತಿಗೆ ಯತ್ನಿಸಿದರು.
ವಿಐಎಸ್ ಎಲ್ ಕಾರ್ಖಾನೆಯಿಂದ ಬಿಜೆಪಿ ಸಭೆ ನಡೆಯುವ ಸ್ಥಳಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಕಾರ್ಮಿಕರನ್ನು ಭದ್ರಾವತಿಯ ಬಸ್ ಸ್ಟ್ಯಾಂಡ್ ಸರ್ಕಲ್ ನಲ್ಲಿಯೇ ಪೊಲೀಸರು ತಡೆದು ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.
Related Articles
ಈ ವೇಳೆ ಕಾರ್ಮಿಕರು. ಬ್ಯಾರಿಕೇಡ್ ತಳ್ಳಿ ಒಳನುಗ್ಗಲು ಯತ್ನಿಸಿದರು. ಸಂಸದ ರಾಘವೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.