Advertisement
ಲೋಕಸಭೆಗೆ ಮಾಹಿತಿ ನೀಡಿರುವ ಕೇಂದ್ರ, ದೇಶದ ವಿವಿಧ ರಾಜ್ಯಗಳಲ್ಲಿನ ಕೆಲವು ವ್ಯಕ್ತಿಗಳು ಐಸಿಸ್ ಉಗ್ರಗಾಮಿ ಸಂಘಟನೆಗೆ ಸೇರ್ಪಡೆಯಾಗಿರುವುದಾಗಿ ತನಿಖಾ ಸಂಸ್ಥೆಗಳು ತಿಳಿಸಿರುವುದಾಗಿ ವಿವರಿಸಿದೆ.
Related Articles
Advertisement
ಎನ್ ಐಎ ತನಿಖೆಯಲ್ಲಿ ಬಯಲುಗೊಂಡಿರುವ ಮಾಹಿತಿ ಪ್ರಕಾರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮಬಂಗಾಳ, ರಾಜಸ್ಥಾನ, ಬಿಹಾರ, ಉತ್ತರಪ್ರದೇಶ, ಮಧ್ಯಪ್ರದೇಶ ಮತ್ತು ಜಮ್ಮು ಕಾಶ್ಮೀರದಲ್ಲಿ ಐಸಿಸ್ ಹೆಚ್ಚು ಸಕ್ರಿಯವಾಗಿರುವುದಾಗಿ ತಿಳಿಸಿದೆ.
ವಿವಿಧ ರಾಜ್ಯಗಳಲ್ಲಿನ ವ್ಯಕ್ತಿಗಳು ಐಸಿಸ್ ಸಂಘಟನೆಗೆ ಸೇರಿರುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆ ಗಮನಕ್ಕೆ ಬಂದಿರುವುದಾಗಿ ಹೇಳಿದೆ.
ಕರ್ನಾಟಕ ಮತ್ತು ಕೇರಳದಲ್ಲಿ ದೊಡ್ಡ ಪ್ರಮಾಣದಲ್ಲಿಯೇ ಐಸಿಸ್ ಸಂಘಟನೆಯ ಉಗ್ರರಿದ್ದಾರೆ ಎಂದು ಈಗಾಗಲೇ ವಿಶ್ವಸಂಸ್ಥೆ ನೀಡಿರುವ ವರದಿಯಲ್ಲಿಯೂ ಉಲ್ಲೇಖಿಸಲಾಗಿತ್ತು. ಭಾರತೀಯ ಉಪಖಂಡದಲ್ಲಿ 150ರಿಂದ 200 ಮಂದಿ ಸದಸ್ಯರು ಐಸಿಸ್ ಗೆ ಸೇರಿದ್ದಾರೆ. ಐಎಸ್ ಇಂಡಿಯನ್ ಹೆಸರಿನಲ್ಲಿ ಕರ್ನಾಟಕದಲ್ಲಿ ಉಗ್ರರು ಕಾರ್ಯಾಚರಣೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಮನಾಲಿ ಟು ಲೇಹ್: ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗ- ಏನಿದರ ವಿಶೇಷತೆ
ಐಸಿಸ್ ಉಗ್ರಗಾಮಿ ಸಂಘಟನೆ ಇಂಟರ್ನೆಟ್ ಆಧಾರಿತ ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿಕೊಳ್ಳುವ ಮೂಲಕ ತಮ್ಮ ಸಿದ್ದಾಂತವನ್ನು ಪ್ರಚುರಪಡಿಸುತ್ತಿದೆ ಎಂದು ವರದಿ ಹೇಳಿದೆ. ಗುಪ್ತಚರ ಇಲಾಖೆಯ ಮನವಿ ಮೇರೆಗೆ ಐಸಿಸ್ ಉಗ್ರಗಾಮಿ ಸಂಘಟನೆಯ ಸಾಮಾಜಿಕ ಜಾಲತಾಣಗಳ ಮೇಲೆ ಸೈಬರ್ ಸ್ಪೇಸ್ ತುಂಬಾ ನಿಕಟವಾಗಿ ಕಣ್ಗಾವಲಿಟ್ಟಿರುವುದಾಗಿ ವರದಿ ಹೇಳಿದೆ. ಅಲ್ಲದೇ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರೆಡ್ಡಿ ತಿಳಿಸಿದ್ದಾರೆ. ಅಷ್ಟೇ ಅಲ್ಲ ಉಗ್ರಗಾಮಿ ಸಂಘಟನೆಗಳ ದೇಣಿಗೆ ಪ್ರಕ್ರಿಯೆ ಬಗ್ಗೆಯೂ ಸರ್ಕಾರಕ್ಕೆ ತಿಳಿದಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.