ಜೆರುಸೆಲಮ್: ಶುಕ್ರವಾರ ಮುಂಜಾನೆ ಇಸ್ರೇಲ್ ಮಿಲಿಟರಿ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ದರಾಜ್ ಟುಫಾ ಬೆಟಾಲಿಯನ್‌ನಲ್ಲಿ ಮೂವರು ಪ್ರಮುಖ ಹಮಾಸ್ ಭಯೋತ್ಪಾದಕರನ್ನು ಹೊಡೆದುರುಳಿಸಿವೆ ಎಂದು ಹೇಳಿದೆ.
ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಮಾಡಿದ ಅಕ್ರಮ ದಾಳಿಯಲ್ಲಿ ಬೆಟಾಲಿಯನ್ ಕಾರ್ಯಕರ್ತರು ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ.
ಹತ್ಯೆಗೊಳಗಾದ ಮೂವರು ಕಾರ್ಯಕರ್ತರನ್ನು ಹಮಾಸ್ ಭಯೋತ್ಪಾದಕ ಸಂಘಟನೆಯ ಅತ್ಯಂತ ಮಹತ್ವದ ಬ್ರಿಗೇಡ್ ಎಂದು ಪರಿಗಣಿಸಲಾಗಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ಹೇಳಿದೆ.
ಈ ಕುರಿತು ಟ್ವಿಟರ್ ‘ಎಕ್ಸ್’ ನಲ್ಲಿ ಟ್ವೀಟ್ ಮಾಡಿದ ಇಸ್ರೇಲ್ ಡಿಫೆನ್ಸ್ ಫೋರ್ಸಸ್ ಗಾಜಾದಲ್ಲಿ ಗುರುವಾರ ನಡೆಸಿದ ವೈಮಾನಿಕ ದಾಳಿಯಲ್ಲಿಹಮಾಸ್ ಭಯೋತ್ಪಾದಕ ಸಂಘಟನೆಯ ಪ್ರಮುಖ ವ್ಯಕ್ತಿಗಳು ಹತರಾಗಿದ್ದಾರೆ ಎಂದು ಪೋಸ್ಟ್ ಮಾಡಿದೆ, ಅಲ್ಲದೆ ಅಕ್ಟೋಬರ್ ಏಳರಂದು ನಮ್ಮ ಮೇಲೆ ನಡೆಸಿದ ದಾಳಿಯಲ್ಲಿ ಬೆಟಾಲಿಯನ್ ಕಾರ್ಯಕರ್ತರು ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಪೋಸ್ಟ್ ಮಾಡಿದೆ.
ಇದಕ್ಕೆ ಸಂಬಂಧಿಸಿ ಇಸ್ರೇಲ್ ಸೇನಾಪಡೆ ಹತ್ಯೆಯಾದ ಮೂವರು ಉಗ್ರರ ಚಿತ್ರಗಳನ್ನು ಬಿಡುಗಡೆಮಾಡಿದೆ.
ಇಸ್ರೇಲ್ ಸೆಕ್ಯುರಿಟಿ ಏಜೆನ್ಸಿ ಶಿನ್ ಬೆಟ್‌ನ ನಿಖರವಾದ ಗುಪ್ತಚರ ಮಾರ್ಗದರ್ಶನದ ಅಡಿಯಲ್ಲಿ ಹಮಾಸ್ ಉಗ್ರರನ್ನು ಹೊಡೆದುರುಳಿಸಲಾಯಿತು ಎಂದು ಇಸ್ರೇಲ್ ಪಡೆ ಹೇಳಿದೆ.
ಗುರುವಾರ ಮುಂಜಾನೆ, ಹಮಾಸ್‌ನ ಗುಪ್ತಚರ ನಿರ್ದೇಶನಾಲಯದ ಉಪ ಮುಖ್ಯಸ್ಥ ಶಾದಿ ಬರುದ್ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ ಎಂದು ಇಸ್ರೇಲಿ ರಕ್ಷಣಾ ಪಡೆ ತಿಳಿಸಿದೆ.
ಇದನ್ನೂ ಓದಿ: Jammu And Kashmir: ಗಡಿಯಲ್ಲಿ ಬಾಲ ಬಿಚ್ಚಿದ ಪಾಕ್ ಗೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ