ಬೀಜಿಂಗ್: ಹಮಾಸ್ ಜೊತೆಗಿನ ಘರ್ಷಣೆಯ ನಡುವೆಯೇ ಬೀಜಿಂಗ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯ ಉದ್ಯೋಗಿಯೊಬ್ಬರಿಗೆ ಇರಿದಿರುವುದಾಗಿ ಇಸ್ರೇಲ್‌ನ ವಿದೇಶಾಂಗ ಸಚಿವಾಲಯ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.
ಮಾಹಿತಿಯ ಪ್ರಕಾರ ಇರಿತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.
ಇಸ್ರೇಲ್ ಮತ್ತು ಹಮಾಸ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಈ ಘಟನೆಯು ನಡೆದಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ ಎನ್ನಲಾಗಿದೆ. ವ್ಯಕ್ತಿಯನ್ನು ಚಾಕುವಿನಿಂದ ಇರಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಅಲ್ಲದೆ ದಾಳಿಗೊಳಗಾದ ಪ್ರದೇಶವು ರಾಯಭಾರ ಕಚೇರಿಯಿಂದ ದೂರದಲ್ಲಿದೆ ಎಂದು ರಾಯಿಟರ್ಸ್ ಹೇಳಿದೆ.
ಇಸ್ರೇಲಿ ರಾಜತಾಂತ್ರಿಕರ ಮೇಲಿನ ದಾಳಿಯು ಇಸ್ರೇಲ್ ಮತ್ತು ಚೀನಾ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಟ್ಟಿಸಿದೆ, ಅಲ್ಲದೆ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ನಡೆಯುತ್ತಿರುವ ಕುರಿತು ಚೀನಾ ನಿಲುವಿನ ಬಗ್ಗೆ ಇಸ್ರೇಲ್ ಕಳವಳ ವ್ಯಕ್ತಪಡಿಸಿತ್ತು.
ಇಸ್ರೇಲ್ ಮತ್ತು ಹಮಾಸ್ ನಡುವಿನ ಒಂದು ವಾರದ ಘರ್ಷಣೆಯಲ್ಲಿ 1,200 ಕ್ಕೂ ಹೆಚ್ಚು ಇಸ್ರೇಲಿಗಳು ಮತ್ತು 1,530 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ, ಸಾವಿರಾರು ಜನರು ಗಾಯಗೊಂಡಿದ್ದಾರೆ ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ.
ಇದನ್ನೂ ಓದಿ: Shimoga; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ