Advertisement

ಏ.2ರಂದು ಇಸ್ರೇಲ್ ಪ್ರಧಾನಿ ಭಾರತ ಪ್ರವಾಸ

09:03 AM Mar 21, 2022 | Team Udayavani |

ಜೆರುಸಲೇಂ: ಭಾರತ ಮತ್ತು ಇಸ್ರೇಲ್‌ ನಡುವಿನ ರಾಜತಾಂತ್ರಿಕ ಬಾಂಧವ್ಯ ಸ್ಥಾಪನೆಯಾಗಿ ಮೂವತ್ತು ವರ್ಷಗಳು ಕಳೆದಿವೆ. ಅದರ ಸಂಸ್ಮರಣಾ ಕಾರ್ಯಕ್ರಮ ನವದೆಹಲಿಯಲ್ಲಿ ನಡೆಯಲಿದೆ. ಅದರಲ್ಲಿ ಭಾಗವಹಿಸುವ ನಿಮಿತ್ತ ಏ.2ರಂದು ಇಸ್ರೇಲ್‌ ಪ್ರಧಾನಿ ನಫ್ತಾಲಿ ಬೆನ್ನೆಟ್‌ ನವದೆಹಲಿಗೆ ಆಗಮಿಸಲಿದ್ದಾರೆ.

Advertisement

2021ರ ಜೂನ್‌ನಲ್ಲಿ ಬೆನ್ನೆಟ್‌ ಇಸ್ರೇಲ್‌ ಪ್ರಧಾನಮಂತ್ರಿಯಾದ ಬಳಿಕ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ತಂತ್ರಜ್ಞಾನ ಮತ್ತು ಸಂಶೋಧನೆ, ಭದ್ರತೆ ಮತ್ತು ಸೈಬರ್‌, ಕೃಷಿ ಮತ್ತು ಹವಾಮಾನ ಬದಲಾವಣೆ ಕ್ಷೇತ್ರಗಳಲ್ಲಿ ಪ್ರವಾಸದ ವೇಳೆ ಎರಡೂ ರಾಷ್ಟ್ರಗಳು ವಿಸ್ತೃತ ಸಹಕಾರ ಮತ್ತು ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಿವೆ.

ಈ ಬಗ್ಗೆ ಹೇಳಿಕೆ ನೀಡಿರುವ ಇಸ್ರೇಲ್‌ ಪ್ರಧಾನಿ ನಫ್ತಾಲಿ ಬೆನ್ನೆಟ್‌ “ಭಾರತದ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ ಜತೆಗಿನ ಬಾಂಧವ್ಯವನ್ನು ಪುನರಾರಂಭಿಸಿದ್ದಾರೆ. ಐತಿಹಾಸಿಕವಾಗಿಯೂ ಇದೊಂದು ಮಹತ್ವದ್ದಾಗಿದೆ. ಭಾರತದ ಪ್ರಧಾನಿ, ನನ್ನ ಸ್ನೇಹಿತ ಪ್ರಧಾನಿ ಮೋದಿಯವರನ್ನು ಮುಂದಿನ ತಿಂಗಳ 2ನೇ ತಾರಿಕಿನಂದು ಭೇಟಿಯಾಗಲು ಉತ್ಸುಕನಾಗಿದ್ದೇನೆ’ ಎಂದು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next