Advertisement
ತೀವ್ರ ಆತಂಕಸೋಂಕಿತ ಆರೋಗ್ಯ ಮಂತ್ರಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಾಗೂ ಇತರ ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುತ್ತಿದ್ದ ಕಾರಣ ತೀವ್ರ ಆತಂಕ ಸೃಷ್ಟಿಯಾಗಿದೆ. ಆರೋಗ್ಯ ಮಂತ್ರಿಯೊಂದಿಗೆ ಹಿಂದಿನ ಎರಡು ವಾರಗಳಿಂದ ಸಂಪರ್ಕದಲ್ಲಿದ್ದ ಎಲ್ಲರನ್ನೂ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ.
ಈ ಹಿಂದೆ ಸರಕಾರದ ಆದೇಶಗಳನ್ನು ಯಹೂದಿಗಳ ಗುರುಗಳು ನಿರ್ಲಕ್ಷಿಸಿದ್ದರು ಎಂಬ ಕಾರಣಕ್ಕೆ ಈಗ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ 19 ಸೋಂಕು ಇಸ್ರೇಲ್‌ನಲ್ಲಿ ತುಂಬಾ ವೇಗವಾಗಿ ಹರಡುತ್ತಿದೆ. ಆರು ಸಾವಿರ ಮಂದಿ ಕೋವಿಡ್ 19 ಪಾಸಿಟಿವ್ ಎಂದು ದೃಢಪಟ್ಟಿದೆ. 26 ಮಂದಿ ಈವರೆಗೂ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.