Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, 15 ರಿಂದ 17 ವಯಸ್ಸಿನೊಳಗಿನವರ ಲಸಿಕಾಕರಣವು ಮುಂದುವರೆ ದಿದ್ದು, ಮೊದಲ ಡೋಸ್ ಶೇ.77 ಹಾಗೂ ಎರಡನೇ ಡೋಸ್ ಶೇ.66 ಪೂರ್ಣಗೊಂಡಿದೆ. ಲಸಿಕಾಕರಣ ತೀವ್ರಗತಿಯಲ್ಲಿ ಹೆಚ್ಚಿಸಿ ಶೇ.100ರಷ್ಟು ಪೂರ್ಣ ಗೊಳಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡಗಳಿರುವ ಜಾಗವನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸಲು ಡಿಡಿಪಿಐ ಅವರಿಂದ ಮಾಹಿತಿ ಪಡೆದು ತಹಶೀಲ್ದಾರ್, ತಾಪಂ ಇಒಗಳು ಕ್ರಮ ವಹಿಸಬೇಕೆಂದು ತಿಳಿಸಿದರು.
ಶೀಘ್ರ ಪ್ರಸ್ತಾವನೆ ಸಲ್ಲಿಸಿ: ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಅಂಜನಪ್ಪ ಮಾತನಾಡಿ, ವಾಜಪೇಯಿ, ಅಂಬೇಡ್ಕರ್, ವಸತಿ ಯೋಜನೆಗಳಡಿ ನಗರ ಸ್ಥಳೀಯ ಸಂಸ್ಥೆಗಳಿಂದ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. ಈವರೆಗೂ ಪೂರ್ಣ ಪ್ರಮಾಣದಲ್ಲಿ ಪ್ರಸ್ತಾವನೆ ಸಲ್ಲಿಸದಿರುವ ನಗರ ಸ್ಥಳೀಯ ಸಂಸ್ಥೆಗಳು ಶೀಘ್ರ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಭೂಮಿ ಪೆಂಡೆನ್ಸಿ ಪ್ರಗತಿ ಪರಿಶೀಲನೆ, ಪೈಕಿ-ಪಹಣಿ ಒಟ್ಟುಗೂಡಿಸುವಿಕೆ, 3/9 ಮಿಸ್‌ಮ್ಯಾಚ್, ಸ್ಮಶಾನ ಹಾಗೂ ವಿವಿಧ ಉದ್ದೇಶಗಳಿಗೆ ಸರ್ಕಾರಿ ಜಮೀನು ಕಾಯ್ದಿರಿಸುವುದು, ಸಾಮಾಜಿಕ ಭದ್ರತಾ ಯೋಜನೆ, ರೈಲ್ವೆ ಯೋಜನೆ, ಎತ್ತಿನಹೊಳೆ ಯೋಜನೆ, ಭೂ- ಸ್ವಾಧೀನ ಪ್ರಗತಿಯ ಬಗ್ಗೆ ಸಭೆಯಲ್ಲಿ ಚರ್ಚಿಸ ಲಾಯಿತು.
ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾ.ಮಟ್ಟದ ಅಧಿಕಾರಿಗಳು ಹಾಜರಿದ್ದರು.