Advertisement
ಸಂಘಟನೆಯ ಸಂಚಾಲಕಿ ಅಕ್ಕಮಹಾದೇವಿ ಮಾತನಾಡಿ, ಪಾರಂ ನಮೂನೆ 50, 53, 57ರಡಿ ಅರ್ಜಿ ಸಲ್ಲಿಸಿದ ರೈತರಿಗೆ ಸರಕಾರ ಭೂಮಿಯ ಹಕ್ಕು ಪತ್ರ ನೀಡಬೇಕು. ತಾಲೂಕಿನಲ್ಲಿ ಕಳೆದ ಹಲವು ವರ್ಷಗಳಿಂದ ಭೂರಹಿತ ರೈತರು ಸರಕಾರಿ ಮತ್ತು ಅರಣ್ಯ ಪ್ರದೇಶವನ್ನು ಸಾಗುವಳಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭೂಮಿ ಹಕ್ಕುಪತ್ರ ಹೊಂದಲು ಅಕ್ರಮಸಕ್ರಮದಡಿ ಸಾಕಷ್ಟು ರೈತರು ಅರ್ಜಿ ಸಲ್ಲಿಸಿ ವರ್ಷಗಳಾಗಿವೆ. ಆದರೆ, ಬಡ ರೈತರಿಗೆ ಜಮೀನಿನ ಹಕ್ಕುಪತ್ರ ನೀಡಲು ಸರಕಾರ ಮೀನಮೇಷ ಎಣಿಸುತ್ತಿದೆ. ತಿಂಗಳೊಳಗೆ ಭೂ ಮಂಜೂರಾತಿ ಸಮಿತಿ ಸಭೆ ನಡೆಸಿ ಹಕ್ಕುಪತ್ರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸರಕಾರ ರೈತರನ್ನು ಒಕ್ಕಲೆಬ್ಬಿಸುವುದನ್ನು ಬಿಟ್ಟು ರೈತಪರ ನಿಲುವುಗಳನ್ನು ಹೊಂದಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
Advertisement
ರೈತರಿಗೆ ಭೂಮಿ ಹಕ್ಕು ಪತ್ರ ನೀಡಿ
02:26 PM Mar 03, 2020 | Suhan S |
Advertisement
Udayavani is now on Telegram. Click here to join our channel and stay updated with the latest news.