Advertisement
ಭೂ ಸ್ವಾಧೀನ ಪ್ರಕ್ರಿಯೆ ಕುರಿತಂತೆ ಕೆಐಡಿಬಿ ವಿಶೇಷ ಭೂ ಸ್ವಾಧೀನ ಅಧಿಕಾರಿ ಅವರು, ಕೈಗಾರಿಕಾ ಪ್ರದೇಶಕ್ಕೆ ಭೂಮಿಯನ್ನು ಏಕೆ ಸ್ವಾಧೀನ ಪಡಿಸಿಕೊಳ್ಳಬಾರದೆಂಬುದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಜು. 7ರಂದು ಹುಲಿಕುಂಟೆ ಗ್ರಾಮದ ಎಂಪಿಸಿಎಸ್ ಮುಂಭಾಗ ಆಯೋ ಜಿಸಿರುವ ಸಭೆಗೆ ಹಾಜರಾಗುವಂತೆ ರೈತರಿಗೆ ನೋಟಿಸ್ ನೀಡಿದ್ದು, ಫಲವತ್ತಾದ ಕೃಷಿಭೂಮಿ ಯನ್ನು ನೀಡುವುದಿಲ್ಲವೆಂದು ಪಟ್ಟು ಹಿಡಿದು ತೀವ್ರ ಹೋರಾಟ ನಡೆಸಿ, ಇಲಾಖೆಯ ಅಧಿಕಾರಿಗಳಿಗೆ ಪ್ರಸ್ತಾಪ ಕೈ ಬಿಡುವಂತೆ ಮನವಿ ಸಲ್ಲಿಸಿದ್ದರು. ಮತ್ತೆ ನೋಟಿಸ್ ನೀಡಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
Related Articles
Advertisement
ವಾಸ್ತವ ಸ್ಥಿತಿ ಹೀಗಿರುವಾಗ ತಾಲೂಕಿಗೆ ಮತ್ತೂಂದು ಕೈಗಾರಿಕಾ ಪ್ರದೇಶ ಸ್ಥಾಪನೆ ಅಗತ್ಯವಿತ್ತೇ ಎನ್ನುವ ಪ್ರಶ್ನೆ ಸಹಜವಾಗಿದೆ. ಹುಲಿಕುಂಟೆ, ಓಬಳಾಪುರ ವ್ಯಾಪ್ತಿಯಲ್ಲಿ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಳ್ಳಲು ಕೃಷಿಕರನ್ನು ಒಕ್ಕಲೆಬ್ಬಿಸಿ ಕೈಗಾರಿಕೆ ಸ್ಥಾಪನೆ ಮಾಡುವ ಅಗತ್ಯವಾದರು ಏನಿದೆ?. ಯಾವುದೇ ಕಾರಣಕ್ಕೂ ನಾವು ಜಮೀನು ನೀಡುವುದಿಲ್ಲ ಎನ್ನುತ್ತಾರೆ ಸ್ಥಳೀಯರು.
1,150 ಎಕರೆಯಲ್ಲಿ ಎಂಎಂಎಲ್ಪಿ ಸ್ಥಾಪನೆ : ನೆಲಮಂಗಲ ತಾಲೂಕಿನ ಓಬಳಾಪುರ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ವ್ಯಾಪ್ತಿಯ 1,150 ಎಕರೆ ಪ್ರದೇಶದಲ್ಲಿ ಮಲ್ಟಿ ಮಾಡಲ್ ಲಾಜಿಸ್ಟಿಕ್ ಪಾರ್ಕ್(ಎಂಎಂಎಲ್ಪಿ) ಸ್ಥಾಪನೆಯಾಗು ತ್ತಿದೆ. ನೆಲಮಂಗಲ ತಾಲೂಕಿನ ಓಬಳಾಪುರ ಕೈಗಾರಿಕಾ ಪ್ರದೇಶದಲ್ಲಿ 550 ಎಕರೆ, ಹುಲಿಕುಂಟೆ ಕೈಗಾರಿಕಾ ಪ್ರದೇಶದಲ್ಲಿ 600 ಎಕರೆ ಗುರುತಿಸಲಾಗಿದೆ. ಹುಲಿಕುಂಟೆ ಸಮೀಪ ಮಲ್ಟಿ ಮಾರ್ಡನ್ ಲಾಜಿಸ್ಟಿಕ್ ಪಾರ್ಕ್ ಸ್ಥಾಪನೆಗೆ 600 ಎಕರೆ ಭೂಸ್ವಾಧೀನ ಕೈಬಿಡುವಂತೆ ಆಗ್ರಹಿಸಿ, ರಾಷ್ಟ್ರೀಯ ಹೆದ್ದಾರಿ 207ರಲ್ಲಿ ರೈತರು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಯೋಜನೆ ಕೈ ಬಿಡುವಂತೆ ರೈತರ ಪ್ರತಿಭಟನಾ ಮನವಿಯನ್ನು ಸರ್ಕಾರದ ಗಮನಕ್ಕೆ ತರಲಾಗುವುದೆಂದು ಭರವಸೆ ನೀಡಿದ್ದರು. ಅಲ್ಲದೆ, ಕೃಷಿ ಭೂಮಿ ಉಳಿಸಿಕೊಳ್ಳಲು ಹುಲಿಕುಂಟೆ ವ್ಯಾಪ್ತಿಯ ಕೃಷಿ ಭೂಮಿ ಭೂ ಸ್ವಾಧೀನ ಕೈಬಿಡಿಸಲು ಮಠಾಧಿಪತಿಗಳ ನೆರವು ಬೇಡಿದ ರೈತರು, ಸರ್ಕಾರಕ್ಕೆ ಪತ್ರ ರವಾನಿಸಿದ್ದರು.