Advertisement

ಜಿಲ್ಲೆಗೆ ಕೊಟ್ಟ ಅನುದಾನದ ಶ್ವೇತಪತ್ರ ಹೊರಡಿಸಿ

06:00 AM Oct 25, 2018 | |

ಬಳ್ಳಾರಿ: ಕಳೆದ ಎರಡು ದಿನದಿಂದ ಸಿದ್ದರಾಮಯ್ಯ ಹಾಗೂ ಶ್ರೀರಾಮುಲು ವಾಕ್ಸಮರಕ್ಕೆ ವೇದಿಕೆಯಾಗಿದ್ದ ಬಳ್ಳಾರಿ ಕ್ಷೇತ್ರದಲ್ಲಿ ಬುಧವಾರ ರಾಮುಲು ಹಾಗೂ ಸಚಿವ ಡಿ.ಕೆ.ಶಿವಕುಮಾರ್‌ ಮಧ್ಯೆ ಸವಾಲ್‌-ಜವಾಬ್‌ ನಡೆದಿದೆ.

Advertisement

ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ನಗರದ ಎಸ್‌ಪಿ ವೃತ್ತದಲ್ಲಿನ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್‌ ಸರಕಾರ ಎಷ್ಟು ಅನುದಾನ ನೀಡಿವೆ ಎಂಬುದಕ್ಕೆ ಶ್ವೇತಪತ್ರ ಹೊರಡಿಸಲಿ. ಬಿಜೆಪಿ ಸರ್ಕಾರ ಇದ್ದಾಗ ನೀಡಿರುವ ಅನುದಾನದ ಬಗ್ಗೆ ನಾವೂ ಶ್ವೇತಪತ್ರ ಹೊರಡಿಸುತ್ತೇವೆ. ಕೇಂದ್ರ ಸರಕಾರ ಹಂಪಿ ಅಭಿವೃದ್ಧಿ ಹೊರತುಪಡಿಸಿ ಕೇವಲ ರಸ್ತೆಗಳ ನಿರ್ಮಾಣಕ್ಕಾಗಿ 10 ಸಾವಿರ ಕೋಟಿ ರೂ.ಅನುದಾನ ನೀಡಿದೆ. 

ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗಲೂ ಜಿಲ್ಲೆಯ ಅಭಿವೃದ್ಧಿಗೆ ನೂರಾರು ಕೋಟಿ ರೂ.ಅನುದಾನ ನೀಡಲಾಗಿದೆ. ಕೇಂದ್ರದಲ್ಲಿ ಅತಿ ಹೆಚ್ಚು ವರ್ಷ ಆಡಳಿತ ನಡೆಸಿ ಇತಿಹಾಸ ಬರೆದಿರುವ ಕಾಂಗ್ರೆಸ್‌ ಸರ್ಕಾರ, ಜಿಲ್ಲೆಯ ಅಭಿವೃದ್ಧಿಗೆ ಎಷ್ಟು ಅನುದಾನ ನೀಡಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ. 

ಇದರಲ್ಲಿ ಕಾಂಗ್ರೆಸ್‌ ಸರಕಾರ ಕೊಟ್ಟ ಅನುದಾನಕ್ಕಿಂತ ಬಿಜೆಪಿ ಅನುದಾನ ಒಂದು ರೂ.ಕಡಿಮೆಯಿದ್ದರೂ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರನ್ನು ಈ ಕ್ಷಣವೇ ಚುನಾವಣಾ ಕಣದಿಂದ ಹಿಂದಕ್ಕೆ ಕರೆಸಿಕೊಳ್ಳಲು ನಾವು ಸಿದ್ಧ. ಕಾಂಗ್ರೆಸ್‌ ಅನುದಾನ ಕಡಿಮೆಯಿದ್ದರೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣದಿಂದ ಹಿಂದೆ ಸರಿಸಲು ಕಾಂಗ್ರೆಸ್‌ ಮುಖಂಡರು ಸಿದ್ಧರಾಗಿದ್ದಾರಾ…? ಎಂದು ಬಹಿರಂಗ ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next